ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 801 ಹೊಸ ಪ್ರಕರಣ, 15 ಮಂದಿ ಸಾವು

Last Updated 11 ಸೆಪ್ಟೆಂಬರ್ 2021, 13:34 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಶನಿವಾರ 801 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 15 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,60,932 ಕ್ಕೆ ಏರಿಕೆಯಾಗಿದೆ. ಆ ಪೈಕಿ 37,487 ಮಂದಿ ಸಾವಿಗೀಡಾಗಿದ್ದಾರೆ.

ಈವರೆಗೆ 29,06,746 ಮಂದಿ ಗುಣಮುಖರಾಗಿದ್ದು, ಸದ್ಯ ರಾಜ್ಯದಲ್ಲಿ 16,672 ಸಕ್ರಿಯ ಪ್ರಕರಣಗಳಿವೆ.

ಇಂದು ಬೆಂಗಳೂರಿನಲ್ಲಿ 207 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಕೊನೆಯುಸಿರೆಳೆದಿದ್ದಾರೆ. ಉಳಿದಂತೆ ದಕ್ಷಿಣ ಕನ್ನಡ 133, ಬೆಳಗಾವಿ 93, ಉಡುಪಿ 86, ಕೊಡಗು 59, ಮೈಸೂರು 47, ಚಿಕ್ಕಮಗಳೂರು ಜಿಲ್ಲೆಯಲ್ಲಿ 39 ಹೊಸ ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 0.67 ರಷ್ಟಿದ್ದು, ಮರಣ ಪ್ರಮಾಣ ಶೇ 1.87 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT