ಬೆಂಗಳೂರು: ರಾಜ್ಯದಲ್ಲಿ 24 ಗಂಟೆಗಳ ಅವಧಿಯಲ್ಲಿ 8,249 ಪ್ರಕರಣಗಳು ವರದಿಯಾಗಿದ್ದು, ಸೋಂಕು ದೃಢ ಪ್ರಮಾಣವು ಶೇ 4.86ಕ್ಕೆ ಇಳಿಕೆಯಾಗಿದೆ.

ಕಳೆದ 58 ದಿನಗಳಲ್ಲಿ ಎರಡನೇ ಬಾರಿಗೆ 24 ಗಂಟೆಗಳ ಅವಧಿಯಲ್ಲಿ 10 ಸಾವಿರಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಪ್ರಕರಣಗಳು ವರದಿಯಾಗಿವೆ. ಸುಮಾರು ಎರಡು ತಿಂಗಳ ಅವಧಿಯಲ್ಲಿ ವರದಿಯಾದ ಕನಿಷ್ಠ ಪ್ರಕರಣಗಳು ಇವಾಗಿವೆ. ಈ ತಿಂಗಳು 11 ದಿನಗಳಲ್ಲಿ 1.43 ಲಕ್ಷ ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಈವರೆಗೆ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 27.47 ಲಕ್ಷ ದಾಟಿದೆ.

ವೈದ್ಯಕೀಯ ತಜ್ಞರ ಪ್ರಕಾರ, ಸೋಂಕು ದೃಢ ಪ್ರಮಾಣವು ಶೇ 5 ಕ್ಕಿಂತ ಕಡಿಮೆ ಇದ್ದಲ್ಲಿ ಮಾತ್ರ ಕಾಯಿಲೆ ನಿಯಂತ್ರಣಕ್ಕೆ ಬಂದಿದೆ ಎಂದು ಪರಿಗಣಿಸಬಹುದಾಗಿದೆ. ಏಪ್ರಿಲ್ ಮೊದಲ ವಾರದಲ್ಲಿ ಸೋಂಕು ದೃಢ ಪ್ರಮಾಣವು ಶೇ 5ರ ಗಡಿ ದಾಟಿ, ಬಳಿಕ ಏರುಗತಿ ಪಡೆದುಕೊಂಡಿತ್ತು. ಕೊರೊನಾ ಸೋಂಕಿತರಲ್ಲಿ 159 ಮಂದಿ ಸಾವಿಗೀಡಾಗಿರುವುದು ಖಚಿತಪಟ್ಟಿದೆ. ಶೇ 1.75ಕ್ಕೆ ಇಳಿಕೆಯಾಗಿದ್ದ ಮರಣ ಪ್ರಮಾಣ ದರ, ಶೇ 1.92ಕ್ಕೆ ಏರಿಕೆಯಾಗಿದೆ.

25 ಲಕ್ಷ ಮಂದಿ ಗುಣಮುಖ: ರಾಜ್ಯದ 28 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 48 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಮೈಸೂರಿನಲ್ಲಿ 20 ಮಂದಿ, ಹಾವೇರಿಯಲ್ಲಿ 10 ಮಂದಿ ಸಾವಿಗೀಡಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ 10 ಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಮರಣ ಪ್ರಕರಣಗಳು ವರದಿಯಾಗಿವೆ. ಈವರೆಗೆ ಕೋವಿಡ್ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 32,644ಕ್ಕೆ ತಲುಪಿದೆ.

ಬೆಂಗಳೂರಿನಲ್ಲಿ 24 ಗಂಟೆಗಳ ಅವಧಿಯಲ್ಲಿ 1,154 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಸಾವಿರಕ್ಕಿಂತ ಕಡಿಮೆ ವರದಿಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದ್ದು, ಸದ್ಯ 2.03 ಲಕ್ಷ ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸೋಂಕಿತರಲ್ಲಿ 14,972 ಮಂದಿಗೆ ಕಾಯಿಲೆ ವಾಸಿಯಾಗಿದೆ.

ಇದನ್ನೂ ಓದಿ... ಪ್ರಜಾವಾಣಿ - ಡೆಕ್ಕನ್ ಹೆರಾಲ್ಡ್ ಕೋವಿಡ್-19 ಪರಿಹಾರ ನಿಧಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.