Covid-19 Karnataka Update: 851 ಹೊಸ ಪ್ರಕರಣ ದೃಢ, 15 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 851 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 15 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,56,988 ಕ್ಕೆ ಏರಿಕೆಯಾಗಿದ್ದು, ಆ ಪೈಕಿ 37,441 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಇದುವರೆಗೆ 29,02,089 ಮಂದಿ ಗುಣಮುಖರಾಗಿದ್ದು, ಸದ್ಯ ರಾಜ್ಯದಲ್ಲಿ 17,432 ಸಕ್ರಿಯ ಪ್ರಕರಣಗಳಿವೆ.
ಇಂದು ಬೆಂಗಳೂರಿನಲ್ಲಿ 248 ಹೊಸ ಪ್ರಕರಣಗಳು ವರದಿಯಾಗಿದ್ದು, 3 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ದಕ್ಷಿಣ ಕನ್ನಡ 227, ಉಡುಪಿ 74, ಮೈಸೂರು 53, ಚಿಕ್ಕಮಗಳೂರು 49, ತುಮಕೂರು ಜಿಲ್ಲೆಯಲ್ಲಿ 44 ಹೊಸ ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 0.71 ರಷ್ಟಿದ್ದು, ಮರಣ ಪ್ರಮಾಣ ಶೇ 1.76 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
Karnataka reports 851 fresh COVID cases, 790 recoveries, and 15 deaths today
Active cases: 17,432
Total recoveries: 29,02,089
Death toll: 37,441 pic.twitter.com/gQ4niw3can— ANI (@ANI) September 7, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.