ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತ್ಯ ಅಕಾಡೆಮಿಯಿಂದ ರಾಜ್ಯಮಟ್ಟದ ಶಿಬಿರ: ಬಿ.ವಿ.ವಸಂತಕುಮಾರ್‌

Last Updated 4 ಅಕ್ಟೋಬರ್ 2021, 17:07 IST
ಅಕ್ಷರ ಗಾತ್ರ

ಬೆಂಗಳೂರು: ‘ಕರ್ನಾಟಕ ಸಾಹಿತ್ಯ ಅಕಾಡೆಮಿಯು ‘ಮಾಧ್ಯಮ ಪ್ರವೇಶಿಕೆ: ಬರಹ ಮತ್ತು ಸಂವಹನ ಕೌಶಲ’ ಕುರಿತು ರಾಜ್ಯಮಟ್ಟದ ಐದು ದಿನಗಳ ಶಿಬಿರ ಆಯೋಜಿಸಿದೆ’ ಎಂದು ಅಕಾಡೆಮಿಯ ಅಧ್ಯಕ್ಷ ಬಿ.ವಿ.ವಸಂತಕುಮಾರ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸೋಮವಾರ ಇಲ್ಲಿ ಮಾತನಾಡಿದ ಅವರು ‘ವಿಶೇಷ ಘಟಕ ಯೋಜನೆ ಅಡಿ ಈ ಶಿಬಿರವು ಇದೇ 7 ರಿಂದ 11ರವರೆಗೆ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ನಿಗದಿಯಾಗಿದೆ. ಇದರಲ್ಲಿ 50 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಪ್ರತಿ ದಿನ ವಿವಿಧ ವಿಷಯಗಳ ಬಗ್ಗೆ ವಿವಿಧ ಕ್ಷೇತ್ರದ ಪರಿಣತರು ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ’ ಎಂದರು.

‘ಇತ್ತೀಚೆಗೆ ಎಚ್‌.ಡಿ.ಕೋಟೆಯ ಹೊಸಹಳ್ಳಿಯ ಗಿರಿಜನರ ಹಾಡಿಯಲ್ಲಿ ಕಮ್ಮಟ ಏರ್ಪಡಿಸಲಾಗಿತ್ತು. ಜೋಯಿಡಾ, ಕೊಡಗು ಹಾಗೂ ಉತ್ತರ ಕರ್ನಾಟಕದ ಭಾಗದಲ್ಲಿ ಕಮ್ಮಟ ನಡೆಸುವ ಆಲೋಚನೆ ಇದೆ. ವಿಮರ್ಶಾ ಕಮ್ಮಟದಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು. ಈ ಕಮ್ಮಟಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 450ಕ್ಕೂ ಹೆಚ್ಚು ಅರ್ಜಿಗಳೂ ಬಂದಿವೆ. ಕುವೆಂಪು ಪ್ರತಿಷ್ಠಾನದ ಸಹಯೋಗದಲ್ಲಿ ಇದೇ 22ರಿಂದ 26ರವರೆಗೆ ಕುಪ್ಪಳ್ಳಿಯಲ್ಲಿ ಕಮ್ಮಟ ನಡೆಸಲು ಸಿದ್ಧತೆ ಆರಂಭಿಸಿದ್ದೇವೆ. ಮುಂದಿನ ದಿನಗಳಲ್ಲಿ ಸಂಶೋಧನಾ ಕಮ್ಮಟ ನಡೆಸಲಾಗುತ್ತದೆ. ಇದಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.

‘ಹೋದ ವರ್ಷ ಶತಮಾನೋತ್ಸವ ಕಾರ್ಯಕ್ರಮಗಳನ್ನು ನಡೆಸಬೇಕಿತ್ತು. ಲಾಕ್‌ಡೌನ್‌ ಕಾರಣದಿಂದ ಅದು ಸಾಧ್ಯವಾಗಿರಲಿಲ್ಲ. ಈಗ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ಸಿಕ್ಕಿರುವುದರಿಂದ ಜನ್ಮಶತಮಾನೋತ್ಸವ ವಿಚಾರ ಸಂಕಿರಣಗಳನ್ನು ನಡೆಸಲು ನಿರ್ಧರಿಸಲಾಗಿದೆ. ‘ಸೀಮಾತೀತ ಸಾಹಿತ್ಯ ಪರ್ಬ’ಕ್ಕಾಗಿ ಸಂಗ್ರಹಿಸಿದ್ದ ತಲಾ ₹1,000 ಹಣವನ್ನು ಸಂಬಂಧಪಟ್ಟವರಿಗೆ ಮರಳಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT