ಮಂಗಳವಾರ, ಆಗಸ್ಟ್ 9, 2022
21 °C

ರಾಜ್ಯದಲ್ಲೂ ಜನಸಂಖ್ಯೆ ನಿಯಂತ್ರಣಕ್ಕೆ ಹೊಸ ಜನಸಂಖ್ಯಾ ನೀತಿ ತರಬೇಕು: ಸಿ.ಟಿ. ರವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಕರ್ನಾಟಕವು ಸಹ ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಲು ಇದು ಅತ್ಯುತ್ತಮ ಸಮಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ  ಟ್ವೀಟ್ ಮಾಡಿದ್ದಾರೆ.

ಸೀಮಿತ ನೈಸರ್ಗಿಕ ಸಂಪನ್ಮೂಲಗಳು ಲಭ್ಯವಿರುವುದರಿಂದ, ಜನಸಂಖ್ಯೆಯ ಸ್ಫೋಟ ಸಂಭವಿಸಿದಲ್ಲಿ ಪ್ರತಿಯೊಬ್ಬ ನಾಗರಿಕನ ಅಗತ್ಯಗಳನ್ನು ಪೂರೈಸುವುದು ಕಷ್ಟವಾಗುತ್ತದೆ ಎಂದು ಸಿ.ಟಿ ರವಿ ಅಭಿಪ್ರಾಯಪಟ್ಟಿದ್ದಾರೆ.

ಉತ್ತರ ಪ್ರದೇಶ ರಾಜ್ಯದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಪಡೆಯುವವರು ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಂತಿಲ್ಲ. ಅಂತಹವರಿಗೆ ಸರ್ಕಾರಿ ಸೌಲಭ್ಯ ಸಿಗುವುದಿಲ್ಲ ಎಂಬ ಕಠಿಣ ಷರತ್ತುಗಳನ್ನಾಧರಿಸಿ ಜನಸಂಖ್ಯಾ ನೀತಿ ಜಾರಿಗೆ ಮುಂದಾಗಿದ್ದು, ಕರಡನ್ನು ಜನರ ಚರ್ಚೆಗೆ ನೀಡಲಾಗಿದೆ. 

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, 'ನಾವು ಈ ಬಗ್ಗೆ ಬಹಳ ಗಂಭೀರವಾಗಿ ಯೋಚಿಸಬೇಕು. ಕರ್ನಾಟಕದ ಜನಸಂಖ್ಯೆ 7 ಕೋಟಿ ದಾಟಿದೆ. ಉತ್ತರ ಪ್ರದೇಶ ಮತ್ತು ಅಸ್ಸಾಂ ಸರ್ಕಾರ ಯಾವ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆಯೀ ಆ ಬಗ್ಗೆ ಕರ್ನಾಟಕ ಕೂಡ ಅಧ್ಯಯನ ನಡೆಸಿ ಚರ್ಚಿಸಲಿ’ ಎಂದು ಇಂಡಿಯಾ ಟುಡೇಗೆ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು