ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾರ್ಚ್ 28ರಿಂದ ಏ. 11ರವರೆಗೆ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನ (2021–22) ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮಾರ್ಚ್ 28ರಿಂದ ಏ. 11ರವರೆಗೆ ನಡೆಯಲಿವೆ. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಮಂಗಳವಾರ ಪ್ರಕಟಿಸಿದೆ.
ಇತ್ತೀಚೆಗೆ ಮಂಡಳಿಯು ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿ, ಆಕ್ಷೇಪಣೆಗಳಿದ್ದರೆ ಜ. 14ರ ಒಳಗೆ ಸಲ್ಲಿಸುವಂತೆ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸೂಚಿಸಿತ್ತು. ಆದರೆ, ಆಕ್ಷೇಪಣೆಗಳು ಸಲ್ಲಿಕೆ ಆಗದಿರುವುದರಿಂದ ಅದೇ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.
ಪ್ರಥಮ ಭಾಷೆ ಮತ್ತು ಐಚ್ಚಿಕ ವಿಷಯಗಳ ಪರೀಕ್ಷೆ ಬೆಳಿಗ್ಗೆ 10.30ರಿಂದ 1.45ರವರೆಗೆ ಹಾಗೂ ದ್ವಿತೀಯ ಭಾಷೆ ಮತ್ತು ತೃತೀಯ ಭಾಷೆಯ ಪರೀಕ್ಷೆ ಬೆಳಿಗ್ಗೆ 10.30ರಿಂದ 1.30ರವರೆಗೆ ನಡೆಯಲಿದೆ.
ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಮಾರ್ಚ್ 28ರಿಂದ ಏಪ್ರಿಲ್ 11ರ ವರೆಗೆ ನಡೆಯಲಿದೆ. @BSBommai #SSLCExams #Karnataka pic.twitter.com/wLOrT39lCp
— B.C Nagesh (@BCNagesh_bjp) January 25, 2022
ಎಸ್ಸೆಸ್ಸೆಲ್ಸಿ ವೇಳಾಪಟ್ಟಿ
ದಿನ; ವಿಷಯ
ಮಾರ್ಚ್ 28; ಪ್ರಥಮ ಭಾಷೆ
ಮಾರ್ಚ್ 30; ದ್ವಿತೀಯ ಭಾಷೆ
ಏಪ್ರಿಲ್ 1; ಅರ್ಥಶಾಸ್ತ್ರ
ಏಪ್ರಿಲ್ 4; ಗಣಿತ
ಏಪ್ರಿಲ್ 6; ಸಮಾಜ ವಿಜ್ಞಾನ
ಏಪ್ರಿಲ್ 8; ತೃತೀಯ ಭಾಷೆ
ಏಪ್ರಿಲ್ 11; ವಿಜ್ಞಾನ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.