ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶೇ 99.9 ವಿದ್ಯಾರ್ಥಿಗಳು ಉತ್ತೀರ್ಣ

Last Updated 9 ಆಗಸ್ಟ್ 2021, 11:47 IST
ಅಕ್ಷರ ಗಾತ್ರ

ಬೆಂಗಳೂರು: 2020–21ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಶೇ 99.9 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದರು.

ಇತ್ತೀಚೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಾಜರಾಗಿದ್ದ 8,71,443 ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿ ಹೊರತುಪಡಿಸಿ ಉಳಿದೆಲ್ಲರೂ ತೇರ್ಗಡೆಯಾಗಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಿಸಿದರು.

ಜುಲೈ 19 ಮತ್ತು 22ಕ್ಕೆ ಪರೀಕ್ಷೆ ನಡೆದಿದ್ದು, 8.76 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ವಿದ್ಯಾರ್ಥಿಗಳು http://sslc.karnataka.gov.in/ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು.

ಒಬ್ಬ ವಿದ್ಯಾರ್ಥಿ ತನ್ನ ಬದಲಿಗೆ ಬೇರೆಯವರನ್ನು ಕಳುಹಿಸಿ ಪರೀಕ್ಷೆ ಬರೆಸಿದ್ದರಿಂದ ಆ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸಲಾಗಿದೆ.

ಫಲಿತಾಂಶದಲ್ಲಿ ಎ + ಶ್ರೇಣಿಯಲ್ಲಿ1,28,931 (ಶೇ.16.25) ವಿದ್ಯಾರ್ಥಿಗಳು, ಎ ಶ್ರೇಣಿಯಲ್ಲಿ 2,50,317(ಶೇ 32)ವಿದ್ಯಾರ್ಥಿಗಳು, ಬಿ ಶ್ರೇಣಿಯಲ್ಲಿ 2,87,684(ಶೇ.36.86) ವಿದ್ಯಾರ್ಥಿಗಳು, ಸಿ ಶ್ರೇಣಿಯಲ್ಲಿ 1,13,610(ಶೇ.14.55) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

625ಕ್ಕೆ 625 ಅಂಕವನ್ನು 157 ವಿದ್ಯಾರ್ಥಿಗಳು ಪಡೆದಿದ್ದಾರೆ. 625ಕ್ಕೆ 623 ಅಂಕವನ್ನು 289 ವಿದ್ಯಾರ್ಥಿಗಳು ಪಡೆದಿದ್ದಾರೆ.

ಶೇ.9 ರಷ್ಟು ಮಕ್ಕಳನ್ನು ಗ್ರೇಸ್ ಮಾರ್ಕ್ ನೀಡಿ ಪಾಸ್ ಮಾಡಲಾಗಿದೆ. 13 ವಿದ್ಯಾರ್ಥಿಗಳಿಗೆ ಗರಿಷ್ಠ 28 ಗ್ರೇಸ್ ಮಾರ್ಕ್ ನೀಡಲಾಗಿದೆ.

ಫಲಿತಾಂಶದಲ್ಲಿ ಶ್ರೇಣಿ:

* ಎ + ಶ್ರೇಣಿಯಲ್ಲಿ 1,28,931 (ಶೇ.16.25) ವಿದ್ಯಾರ್ಥಿಗಳು
* ಎ ಶ್ರೇಣಿಯಲ್ಲಿ 2,50,317 (ಶೇ 32) ವಿದ್ಯಾರ್ಥಿಗಳು
* ಬಿ ಶ್ರೇಣಿಯಲ್ಲಿ 2,87,684 (ಶೇ.36.86) ವಿದ್ಯಾರ್ಥಿಗಳು
* ಸಿ ಶ್ರೇಣಿಯಲ್ಲಿ 1,13,610 (ಶೇ.14.55) ವಿದ್ಯಾರ್ಥಿಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT