ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಎಸ್ಸೆಸ್ಸೆಲ್ಸಿ ಫಲಿತಾಂಶ: ಒಬ್ಬ ವಿದ್ಯಾರ್ಥಿ ಮಾತ್ರ ಫೇಲ್‌!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: 2020–21ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಾಜರಾಗಿದ್ದ 8,71,443 ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿ ಹೊರತುಪಡಿಸಿ ಉಳಿದೆಲ್ಲರೂ ತೇರ್ಗಡೆಯಾಗಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರಕಟಿಸಿದರು. ಈ ಬಾರಿ ಶೇ 99.9 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಒಬ್ಬ ವಿದ್ಯಾರ್ಥಿ ತನ್ನ ಬದಲಿಗೆ ಬೇರೆಯವರನ್ನು ಕಳುಹಿಸಿ ಪರೀಕ್ಷೆ ಬರೆಸಿರುವುದು ಗೊತ್ತಾಗಿ, ಆ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸಲಾಗಿದೆ.

ಎಸ್ಸೆಸ್ಸೆಲ್ಸಿ ಫಲಿತಾಂಶ ಹೀಗಿದೆ....

• ಜುಲೈ 19 ಮತ್ತು 22ರಂದು ನಡೆದಿದ್ದ ಪರೀಕ್ಷೆ

• 157 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

• 289 ವಿದ್ಯಾರ್ಥಿಗಳಿಗೆ 625ಕ್ಕೆ 623 ಅಂಕ

ಇದನ್ನೂ ಓದಿ: ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶೇ 99.9 ವಿದ್ಯಾರ್ಥಿಗಳು ಉತ್ತೀರ್ಣ

• 25,702 ವಿದ್ಯಾರ್ಥಿಗಳಿಗೆ ಪ್ರಥಮ ಭಾಷೆಯ ಪರೀಕ್ಷೆಯಲ್ಲಿ ಗರಿಷ್ಠ 125 ಅಂಕಗಳಿಗೆ 125 ಅಂಕ (ಶೇ.100)

• ದ್ವಿತೀಯ ಭಾಷೆಯಲ್ಲಿ 36,628 ಹಾಗೂ ತೃತೀಯ ಭಾಷೆಯಲ್ಲಿ 36,776 ವಿದ್ಯಾರ್ಥಿಗಳಿಗೆ 100ಕ್ಕೆ ನೂರು ಅಂಕ.

• ಗಣಿತದಲ್ಲಿ 6,321, ವಿಜ್ಞಾನದಲ್ಲಿ 3,649, ಸಮಾಜ ವಿಜ್ಞಾನ ವಿಷಯದಲ್ಲಿ 9,367 ವಿದ್ಯಾರ್ಥಿಗಳಿಗೆ ಶೇ.100

• ಶೈಕ್ಷಣಿಕ ಜಿಲ್ಲೆಗಳು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ‘ಎ’ ಗ್ರೇಡ್‌. ಶೇ 75ರಿಂದ ಶೇ 100ರಷ್ಟು ಫಲಿತಾಂಶ.

• 204 ತಾಲ್ಲೂಕುಗಳ ಪೈಕಿ ಒಂದು ತಾಲ್ಲೂಕು ಮಾತ್ರ ‘ಬಿ' ಗ್ರೇಡ್‌ (ಶೇ 60ರಿಂದ ಶೇ 75).

• ಶೇ.9 ರಷ್ಟು ಮಕ್ಕಳಿಗೆ ಗ್ರೇಸ್ ಮಾರ್ಕ್ ನೀಡಿ ಪಾಸ್. 13 ವಿದ್ಯಾರ್ಥಿಗಳಿಗೆ ಗರಿಷ್ಠ 28 ಗ್ರೇಸ್ ಮಾರ್ಕ್

ಇದನ್ನೂ ಓದಿ: ಎಸ್ಸೆಸ್ಸೆಲ್ಸಿ ಫಲಿತಾಂಶ: 25,702 ವಿದ್ಯಾರ್ಥಿಗಳಿಗೆ ಪ್ರಥಮ ಭಾಷೆಯಲ್ಲಿ ಶೇ 100

• ಎ + ಶ್ರೇಣಿಯಲ್ಲಿ 1,28,931 (ಶೇ.16.25) ವಿದ್ಯಾರ್ಥಿಗಳು

• ಎ ಶ್ರೇಣಿಯಲ್ಲಿ 2,50,317 (ಶೇ 32) ವಿದ್ಯಾರ್ಥಿಗಳು

• ಬಿ  ಶ್ರೇಣಿಯಲ್ಲಿ 2,87,684 (ಶೇ.36.86) ವಿದ್ಯಾರ್ಥಿಗಳು

• ಸಿ ಶ್ರೇಣಿಯಲ್ಲಿ 1,13,610 (ಶೇ.14.55) ವಿದ್ಯಾರ್ಥಿಗಳು

• ವಿದ್ಯಾರ್ಥಿಗಳು http://sslc.karnataka.gov.in/ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು.

* ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು  https://kseeb.karnataka.gov.in/SSLCMAINEXAMRESULT2021/ ಈ ಲಿಂಕ್ ಮೂಲಕವೂ ನೋಡಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು