ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಫಲಿತಾಂಶ: ತೆರೆಯದ ವೆಬ್‌ಸೈಟ್, ಪರದಾಡಿದ ವಿದ್ಯಾರ್ಥಿಗಳು

Last Updated 9 ಆಗಸ್ಟ್ 2021, 11:46 IST
ಅಕ್ಷರ ಗಾತ್ರ

ಬೆಂಗಳೂರು: 2020–21ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗುತ್ತಿದ್ದಂತೆ, ಸಾವಿರಾರು ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಲು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್‌ಸೈಟ್‌ಗೆ ಭೇಟಿ ನೀಡಿದರೆ, ಅದು ತೆರೆದುಕೊಳ್ಳದ ಪರಿಣಾಮ ವಿದ್ಯಾರ್ಥಿಗಳು ಪರದಾಡಿದರು.

https://sslc.karnataka.gov.in ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು ಎಂದು ಮಂಡಳಿ ಹೇಳಿತ್ತು. ಈ ವೆಬ್‌ಸೈಟ್‌ಗೆ ಭೇಟಿ ನೀಡಿದರೆ ಅದು ತೆರೆದುಕೊಳ್ಳುತ್ತಿಲ್ಲ. ಮಂಡಳಿಯ ಅಧಿಕೃತ ವೆಬ್‌ಸೈಟ್‌ ಲಿಂಕ್‌ http://kseeb.kar.nic.in/ಗೆ ಭೇಟಿ ನೀಡಿದರೂ, ಅದು https://sslc.karnataka.gov.in ಲಿಂಕ್‌ಗೇ ಸಂಪರ್ಕ ಕಲ್ಪಿಸುತ್ತಿದೆ.

‘ಸಾವಿರಾರು ವಿದ್ಯಾರ್ಥಿಗಳು ಏಕಕಾಲಕ್ಕೆ ವೆಬ್‌ಸೈಟ್‌ಗೆ ಭೇಟಿ ನೀಡುತ್ತಿರುವುದರಿಂದ ತಾಂತ್ರಿಕವಾಗಿ ತೊಂದರೆಯಾಗಿತ್ತು. ಈಗ ವೆಬ್‌ಸೈಟ್‌ ಕಾರ್ಯನಿರ್ವಹಿಸುತ್ತಿದೆ. ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು https://kseeb.karnataka.gov.in/SSLCMAINEXAMRESULT2021/ ಈ ಲಿಂಕ್ ಮೂಲಕವೂ ನೋಡಬಹುದು’ ಎಂದು ಮಂಡಳಿಯ ನಿರ್ದೇಶಕಿ ಎ. ಸುಮಂಗಲಾ ‘ಪ್ರಜಾವಾಣಿ’ ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT