ಬೆಂಗಳೂರು: ಚುನಾವಣಾ ವರ್ಷದಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಕೊನೆಯ ಮತ್ತು ತಮ್ಮ ಎರಡನೇ ಬಜೆಟ್ ಮಂಡಿಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ, ವಿದಾನಸೌಧದಲ್ಲಿ ಬಜೆಟ್‌ಗೆ ಸಚಿವ ಸಂಪುಟದ ಅನುಮೋದನೆ ಪಡೆದಿದ್ದಾರೆ.
ಈ ನಡುವೆ ಬಜೆಟ್ ತಯಾರಿಕೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳ ಜೊತೆ ಮಾಧ್ಯಮಗಳಿಗೆ ಬ್ರೀಫ್‌ಕೇಸ್ ಅನ್ನು ಪ್ರದರ್ಶಿಸಿದರು.
ಇದಕ್ಕೂ ಮುನ್ನ, ಬೆಂಗಳೂರಿನ ಶ್ರೀಕಂಠೇಶ್ವರ ದೇವಸ್ಥಾನ ಹಾಗೂ ಶ್ರೀ ಆಂಜನೇಯ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಸಿಎಂ ಪೂಜೆ ನೆರವೇರಿಸಿದರು.
ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಎರಡನೇ ಬಜೆಟ್ ಮಂಡಿಸುತ್ತಿರುವುದು ನನ್ನ ಸೌಭಾಗ್ಯವಾಗಿದೆ. ಇದರ ಪ್ರಯುಕ್ತ ಬೆಂಗಳೂರಿನ ಶ್ರೀಕಂಠೇಶ್ವರ ದೇವಸ್ಥಾನ ಹಾಗೂ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಕರ್ನಾಟಕದ ಸಮಸ್ತ ಜನತೆಯ ಹೆಸರಿನಲ್ಲಿ ಅರ್ಚನೆ ಮಾಡಿಸಲಾಯಿತು ಎಂದು ಬೊಮ್ಮಾಯಿ ಟ್ವಿಟ್ ಮಾಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.