ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪುಟ ಸಭೆ ಮೇ 11ಕ್ಕೆ ಮುಂದೂಡಿಕೆ

Last Updated 4 ಮೇ 2022, 7:00 IST
ಅಕ್ಷರ ಗಾತ್ರ

ಬೆಂಗಳೂರು: ಗುರುವಾರ ಬೆಳಿಗ್ಗೆ ನಡೆಯಬೇಕಿದ್ದ ಸಂಪುಟ ಸಭೆಯನ್ನು ಮೇ 11ಕ್ಕೆ‌ ಮುಂದೂಡಲಾಗಿದೆ.

ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಗುರುವಾರ ಬೆಳಿಗ್ಗೆ 11.30ಕ್ಕೆ ಸಂಪುಟ ಸಭೆ ನಿಗದಿಯಾಗಿತ್ತು. ಅದನ್ನು ರದ್ದುಪಡಿಸಿ ಮೇ 11ರ ಬೆಳಿಗ್ಗೆ 11 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಸಚಿವ ಸಂಪುಟ ವಿಭಾಗದ ಜಂಟಿ ಕಾರ್ಯದರ್ಶಿ ಆರ್. ಚಂದ್ರಶೇಖರ್ ಬುಧವಾರ ಪರಿಷ್ಕೃತ ಸೂಚನಾ ಪತ್ರ ಹೊರಡಿಸಿದ್ದಾರೆ‌.

ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನರ್ ರಚನೆ ಕುರಿತು ಬಿಜೆಪಿಯಲ್ಲಿ ಚರ್ಚೆ ನಡೆಯುತ್ತಿದೆ. ಮೇ 10ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸುವ ಸಾಧ್ಯತೆ ಇದೆ. ಈ ಕಾರಣದಿಂದಾಗಿಯೇ ಸಂಪುಟ ಸಭೆ ಮುಂದೂಡಿರುವ ಸಾಧ್ಯತೆ ಹೆಚ್ಚಾಗಿದೆ ಎಂಬ ಮಾಹಿತಿ ಬಿಜೆಪಿ ಮೂಲಗಳಿಂದ ಲಭ್ಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT