ಮಂಗಳವಾರ, ಜೂನ್ 28, 2022
26 °C

Karnataka Covid-19 Update: ಮೃತರ ಸಂಖ್ಯೆ ಮತ್ತೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋವಿಡ್‌ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರ ನಡೆಸುತ್ತಿರುವುದು–ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಮೃತರ ಸಂಖ್ಯೆ ಅಲ್ಪ ಏರಿದ್ದು, ಸೋಮವಾರ 340 ಮಂದಿ ಸಾವಿಗೀಡಾಗಿದ್ದಾರೆ.  ರಾಜ್ಯದಲ್ಲಿ ಕೋವಿಡ್‌ ಮರಣ ಪ್ರಮಾಣ ದರ ಶೇ 2.84 ಹಾಗೂ ಮೃತಪಟ್ಟವರ ಒಟ್ಟು ಸಂಖ್ಯೆ 31,920ಕ್ಕೆ ಮುಟ್ಟಿದೆ.

ಹಿಂದಿನ 24 ಗಂಟೆಗಳಲ್ಲಿ 11,958 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದ್ದು, ಕೋವಿಡ್‌ ರೋಗಿಗಳ ಒಟ್ಟು ಸಂಖ್ಯೆ 27.07 ಲಕ್ಷಕ್ಕೆ ಏರಿಕೆಯಾಗಿದೆ. ಸೋಂಕು ದೃಢ ಪ್ರಮಾಣ ಶೇ 9.08ಕ್ಕೆ ಇಳಿದಿದೆ.

ಸೋಮವಾರ 27,299 ಮಂದಿಯಲ್ಲಿ ಕಾಯಿಲೆ ವಾಸಿಯಾಗಿದೆ. ಹೀಗಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 2.38 ಲಕ್ಷಕ್ಕೆ ತಗ್ಗಿದೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 24.36 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ ಪರೀಕ್ಷೆಗಳ ಸಂಖ್ಯೆ ಮತ್ತೆ ಕಡಿಮೆಯಾಗಿದೆ. ಒಂದು ದಿನದಲ್ಲಿ 1.31ಲಕ್ಷ ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಯಾದಗಿರಿ ಬಿಟ್ಟು ಉಳಿದ ಎಲ್ಲಾ ಜಿಲ್ಲೆಗಳಲ್ಲೂ ಮರಣ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 199 ರಷ್ಟಿದೆ . ಬೆಳಗಾವಿ (15), ಹಾಸನ ಮತ್ತು ಹಾವೇರಿ (ತಲಾ 10), ಮೈಸೂರು (17), ಬಳ್ಳಾರಿ (9), ಧಾರವಾಡ (8) ಹಾಗೂ ಶಿವಮೊಗ್ಗದಲ್ಲೂ (9) ಹೆಚ್ಚು ಜನ ಮೃತಪಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು