ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆಗಳಲ್ಲಷ್ಟೇ ಮದುವೆ: 40ರ ಮಿತಿ, ರಾಜ್ಯ ಸರ್ಕಾರ ಆದೇಶ

Last Updated 8 ಮೇ 2021, 19:12 IST
ಅಕ್ಷರ ಗಾತ್ರ

ಬೆಂಗಳೂರು: ಈಗಾಗಲೇ ನಿಗದಿಯಾದ ಮದುವೆಗಳನ್ನು ಮನೆಗಳಲ್ಲಿ ಮಾತ್ರ ನಡೆಸುವಂತೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅಲ್ಲದೆ, ಮದುವೆಗೆ ಕುಟುಂಬದ ಆಪ್ತರು ಸೇರಿ ಕೇವಲ 40 ಜನರಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಕಲ್ಯಾಣ ಮಂಟಪ ಅಥವಾ ಸಭಾಂಗಣದಲ್ಲಿ ಮದುವೆ ಸಮಾರಂಭ ನಡೆಸುವಂತಿಲ್ಲ ಎಂದು ಆದೇಶ ಹೇಳಿದೆ. ಈ ಕುರಿತು ಪರಿಷ್ಕೃತ ಆದೇಶವನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ಎನ್‌. ಮಂಜುನಾಥ ಪ್ರಸಾದ್‌ ಶನಿವಾರ ಹೊರಡಿಸಿದ್ದಾರೆ.

‘ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಬಂಧಿಸಿದ ಜಂಟಿ ಆಯುಕ್ತರಿಂದ ಹಾಗೂ ಜಿಲ್ಲೆಗಳಲ್ಲಿ ಆಯಾ ವ್ಯಾಪ್ತಿಯ ತಹಶೀಲ್ದಾರ್‌ಗಳಿಂದ ಮದುವೆ ಆಮಂತ್ರಣದ ಜೊತೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು. ಈ ಅರ್ಜಿ ಆಧರಿಸಿ 40 ಪಾಸ್‌ಗಳನ್ನು ವಿತರಿಸಲಾಗುವುದು. ಈ ಪಾಸ್‌ ಇದ್ದವರಿಗೆ ಮಾತ್ರ ಮದುವೆಯಲ್ಲಿ ಭಾಗವಹಿಸಲು ಅನುಮತಿ ನೀಡಲಾಗುವುದು’ ಎಂದೂ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT