ಬುಧವಾರ, ಜನವರಿ 20, 2021
21 °C

ಸಂಪುಟದಿಂದ ಕೈಬಿಡುವುದಿಲ್ಲ ಎಂಬ ವಿಶ್ವಾಸವಿದೆ: ಅಬಕಾರಿ ಸಚಿವ ಎಚ್. ನಾಗೇಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 'ಕಷ್ಟ ಕಾಲದಲ್ಲಿ ಯಡಿಯೂರಪ್ಪ ಅವರ ಕೈ ಹಿಡಿದಿದ್ದೇನೆ. ನನ್ನನ್ನು ಸಂಪುಟದಿಂದ ಕೈಬಿಡುವುದಿಲ್ಲ ಎಂಬ ವಿಶ್ವಾಸವಿದೆ' ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿದರು. 

ಸುದ್ದಿಗಾರರ ಜೊತೆ ಸೋಮವಾರ ‌ಮಾತನಾಡಿದ ಅವರು, 'ನನ್ನನ್ನು ಸಂಪುಟದಿಂದ ಕೈಬಿಡುವ ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಮೈತ್ರಿ ಸರ್ಕಾರದಲ್ಲಿ ನಾನು ಸಚಿವನಾಗಿದ್ದೆ.‌ ಮೊದಲು ರಾಜೀನಾಮೆ ನೀಡಿ ಬಂದವನೇ ನಾನು. ಆ ಬಳಿಕ, ಆರ್. ಶಂಕರ್ ಎಲ್ಲರೂ ರಾಜೀನಾಮೆ ನೀಡಿ ಬಂದಿದ್ದಾರೆ' ಎಂದರು. 

'ಅವಧಿ ಪೂರ್ಣವಾಗುವವರೆಗೂ ಸಚಿವರಾಗಿ ಇರುತ್ತೀರಾ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಕಷ್ಟ ಕಾಲದಲ್ಲಿ ನಾನು ಈ ಸರ್ಕಾರ ರಚನೆಗೆ ಸಹಾಯ ಮಾಡಿದ್ದೇನೆ. ಹೀಗಾಗಿ, ಮುಖ್ಯಮಂತ್ರಿ ಮಾತು ಉಳಿಸಿಕೊಳ್ಳುತ್ತಾರೆ ಎಂಬ ವಿಶ್ವಾಸ ಇದೆ' ಎಂದೂ ಹೇಳಿದರು. 

'ಒಂದು ವೇಳೆ ಕೈ ಬಿಡುವ ಸಂದರ್ಭ ಬಂದಲ್ಲಿ ಆಗ ತೀರ್ಮಾನ ಮಾಡುತ್ತೇನೆ. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ' ಎಂದು ಹೇಳಿದ ನಾಗೇಶ್ ಬೇಸರದಿಂದಲೇ ತೆರಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು