ವಾರಾಂತ್ಯದೊಳಗೆ ಟಿಇಟಿ ಫಲಿತಾಂಶ
ಬೆಂಗಳೂರು: ರಾಜ್ಯದಲ್ಲಿ ನ. 6ರಂದು ನಡೆದಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಫಲಿತಾಂಶವನ್ನು ಮುಂದಿನ ವಾರಾಂತ್ಯದಲ್ಲಿ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ.
1ರಿಂದ 5ನೇ ತರಗತಿಯ ಪ್ರಾಥಮಿಕ ಶಾಲಾ ಶಿಕ್ಷಕರು, 6ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪರೀಕ್ಷೆ ಕುಳಿತುಕೊಳ್ಳುವ ಅರ್ಹತೆ ಪಡೆಯಲು ಟಿಇಟಿ ಮಾನದಂಡವಾಗಿದೆ. ಕಳೆದ ತಿಂಗಳು 781 ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗೆ 3,32,913 ಅಭ್ಯರ್ಥಿಗಳು ಹಾಜರಾಗಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.