ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ತಿಳಿ ಕನ್ನಡ' ಪಠ್ಯಪುಸ್ತಕ ರಚನಾ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮಧುಸೂದನ ರಾಜೀನಾಮೆ

ಕುವೆಂಪು ಅವರಿಗೆ ಅವಮಾನ ಖಂಡಿಸಿ ನಿರ್ಧಾರ
Last Updated 31 ಮೇ 2022, 11:24 IST
ಅಕ್ಷರ ಗಾತ್ರ

ಬೆಂಗಳೂರು:ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಈಗಿನ ಅಧ್ಯಕ್ಷರು ಕುವೆಂಪು ಅವರ ಬಗ್ಗೆ ಲಘುವಾಗಿ ಗೇಲಿ ಮಾಡಿದ್ದಾರೆ. ಇದರಿಂದ ಮನನೊಂದು ಹಾಗೂ ಪ್ರತಿಭಟಿಸುತ್ತಾ,9ನೇ ತರಗತಿಯ ದ್ವಿತೀಯ ಭಾಷಾ 'ತಿಳಿ ಕನ್ನಡ' ಪಠ್ಯಪುಸ್ತಕ ರಚನಾ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಕೆ.ಎಸ್‌.ಮಧುಸೂದನ ತಿಳಿಸಿದ್ದಾರೆ.

ಈ ಸಂಬಂಧ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರಿಗೆ ಪತ್ರ ಬರೆದಿದ್ದಾರೆ.

''ಕರ್ನಾಟಕ ರಾಜ್ಯದ ಒಂಬತ್ತನೆಯ ತರಗತಿಯ ದ್ವಿತೀಯ ಭಾಷಾ ಕನ್ನಡ ಪಠ್ಯಪುಸ್ತಕ 'ತಿಳಿ ಕನ್ನಡ'ಪಠ್ಯಪುಸ್ತಕ ರಚನಾ ಸಮಿತಿ ಅಧ್ಯಕ್ಷನಾಗಿ ನಾನು ಕಾರ್ಯನಿರ್ವಹಿಸಿದ್ದೆನು. ಈಗಲೂ ನನ್ನ ಅಧ್ಯಕ್ಷತೆಯಲ್ಲಿ ಅದೇ ಪಠ್ಯ ಮುಂದುವರಿದಿದೆ ಎಂದು ತಿಳಿದು ಬಂತು. ಕರ್ನಾಟಕದನಾಡು–ನುಡಿ–ಸಂಸ್ಕೃತಿಯ ಅಂತಃಸಾಕ್ಷಿಯಂತಿರುವ ಮಾನ್ಯ ಕುವೆಂಪು ಅವರನ್ನು ಈಗಿನ ಪಠ್ಯ ಪರಿಷ್ಕರಣಾ ಸಮಿತಿಯ ಅಧ್ಯಕ್ಷರು ಗೇಲಿ ಮಾಡಿದ್ದಕ್ಕೆ ಮನನೊಂದು ಮತ್ತು ಪ್ರತಿಭಟಿಸುತ್ತಾ, ನಾನು 'ತಿಳಿ ಕನ್ನಡ' ದ್ವಿತೀಯ ಭಾಷಾ ಕನ್ನಡ ಪಠ್ಯಪುಸ್ತಕ– ಒಂಬತ್ತನೆಯ ತರಗತಿಯ ಪಠ್ಯಪುಸ್ತಕ ರಚನಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುತ್ತೇನೆ. ಪಠ್ಯದಲ್ಲಿ ನನ್ನ ಹೆಸರು ಹಾಗೂ ನಾನು ಬರೆದ 'ಪಾಠ ಮಾಡುವ ಮುನ್ನ' ಪ್ರಸ್ತಾವನೆಯನ್ನು ಸೇರಿಸಬಾರದಾಗಿ ವಿನಮ್ರ ವಿನಂತಿ'' ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT