ಶನಿವಾರ, ಏಪ್ರಿಲ್ 1, 2023
23 °C

ಧಾರವಾಡದ ಕುಂದಗೋಳದಲ್ಲಿ ಅಮಿತ್ ಶಾ ರೋಡ್ ಶೋ: ಬೊಮ್ಮಾಯಿ, ಬಿಎಸ್‌ವೈ ಸಾಥ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರೋಡ್ ಶೋ ನಡೆಸುತ್ತಿದ್ದಾರೆ. 

ಬಿಜೆಪಿ 'ವಿಜಯ ಸಂಕಲ್ಪ ಅಭಿಯಾನ'ದ ಅಂಗವಾಗಿ ರೋಡ್ ಶೋ ಹಮ್ಮಿಕೊಳ್ಳಲಾಗಿದೆ. ರೋಡ್ ಶೋ ನಡೆಸುತ್ತಿರುವ ಮಾರ್ಗದಲ್ಲಿ ಪೊಲೀಸರ ಬಿಗಿ ಭದ್ರತೆ ಏರ್ಪಡಿಸಲಾಗಿದೆ. 

ರೋಡ್ ಶೋಗೆ ಜನಸಾಗರವೇ ಹರಿದು ಬಂದಿದ್ದು, ಪ್ರವಾಸಿ ಮಂದಿರದಿಂದ ಗಾಳಿ ಮರೆಮ್ಮ ದೇವಸ್ಥಾನದವರೆಗೆ ರೋಡ್ ಶೋ ನಡೆಯಲಿದೆ.

ಅಮಿತ್‌ ಶಾಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್, ಪ್ರಲ್ಹಾದ ಜೋಶಿ ಸಾಥ್ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು