ಬುಧವಾರ, ಅಕ್ಟೋಬರ್ 28, 2020
17 °C

Covid-19 Karnataka Update | ಮೃತರ ಸಂಖ್ಯೆ 8,503ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕಿತರಲ್ಲಿ ಮತ್ತೆ 86 ಮಂದಿ ಮೃತಪಟ್ಟಿರುವುದು ಶನಿವಾರ ದೃಢಪಟ್ಟಿದೆ. ಇದರಿಂದಾಗಿ ರಾಜ್ಯದಲ್ಲಿ ಕೋವಿಡ್‌ಗೆ ಸಾವಿಗೀಡಾದವರ ಸಂಖ್ಯೆ 8,503ಕ್ಕೆ ಏರಿಕೆಯಾಗಿದೆ. ‌

ಹೊಸದಾಗಿ 8,811 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 5.66 ಲಕ್ಷಕ್ಕೆ ಏರಿಕೆಯಾಗಿದೆ. ಈ ತಿಂಗಳು 26 ದಿನಗಳಲ್ಲಿ 2.23 ಲಕ್ಷ ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 8,600 ಪ್ರಕರಣಗಳು ಪತ್ತೆಯಾಗಿವೆ. ಇದರಿಂದಾಗಿ ಸೋಂಕು ದೃಢ ಪ್ರಮಾಣವು ಶೇ 12.33ಕ್ಕೆ ಏರಿಕೆಯಾಗಿದೆ.

ಕೋವಿಡ್ ಪೀಡಿತರಲ್ಲಿ ಮತ್ತೆ 5,417 ಮಂದಿಗೆ ಕಾಯಿಲೆ ವಾಸಿಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 4.55 ಲಕ್ಷಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತೆ ಲಕ್ಷದ ಗಡಿ ದಾಟಿದ್ದು, ಸೋಂಕಿತರು ಆಸ್ಪತ್ರೆಗಳು, ಕೋವಿಡ್ ಆರೈಕೆ ಕೇಂದ್ರಗಳು ಹಾಗೂ ಮನೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಾಗುವ ರೋಗಿಗಳ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಸದ್ಯ 832 ಮಂದಿ ಕೊರೊನಾ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಬೆಂಗಳೂರಿನಲ್ಲಿ ಸತತ ಮೂರನೇ ದಿನ ಕೂಡ ಪ್ರಕರಣಗಳ ಸಂಖ್ಯೆ 4 ಸಾವಿರದ ಗಡಿ ದಾಟಿದೆ. ಹೊಸದಾಗಿ 4,083 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 2.16 ಲಕ್ಷಕ್ಕೆ ತಲುಪಿದೆ.

ಕೆಲ ದಿನಗಳಿಂದ ಪ್ರತಿನಿತ್ಯ 500ರ ಗಡಿ ದಾಟುತ್ತಿದ್ದ ಮೈಸೂರಿನಲ್ಲಿ ಕೇವಲ 73 ಪ್ರಕರಣಗಳು ವರದಿಯಾಗಿವೆ. ಬಳ್ಳಾರಿಯಲ್ಲಿ
ಹೊಸದಾಗಿ 462 ಮಂದಿ ಸೋಂಕಿತರಾಗಿದ್ದಾರೆ. ಅಲ್ಲಿ ಒಟ್ಟು ಸೋಂಕಿತರ ಸಂಖ್ಯೆ 30 ಸಾವಿರದ ಗಡಿ ದಾಟಿದೆ. ದಕ್ಷಿಣ ಕನ್ನಡ (420), ಕೊಪ್ಪಳ (352), ಮಂಡ್ಯ (255), ಶಿವಮೊಗ್ಗ (254), ಕಲಬುರ್ಗಿ (249) ಜಿಲ್ಲೆಯಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು