ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಇಂದು ಮತದಾನ

Last Updated 27 ಡಿಸೆಂಬರ್ 2021, 3:42 IST
ಅಕ್ಷರ ಗಾತ್ರ

ಬೆಂಗಳೂರು: ಐದು ನಗರಸಭೆಗಳೂ ಸೇರಿದಂತೆ ಅವಧಿ ಪೂರ್ಣಗೊಂಡಿರುವ 58 ನಗರ ಸ್ಥಳೀಯ ಸಂಸ್ಥೆಗಳು ಹಾಗೂ 57 ಗ್ರಾಮ ಪಂಚಾಯಿತಿಗಳ ಸದಸ್ಯರ ಆಯ್ಕೆಗೆ ಸೋಮವಾರ ಮತದಾನ ನಡೆಯಲಿದೆ.

ವಿವಿಧ ಕಾರಣಗಳಿಂದ ತೆರವಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಎಂಟು ಸ್ಥಾನಗಳು ಮತ್ತು ಹಲವು ಗ್ರಾಮ ಪಂಚಾಯಿತಿಗಳ 386 ಸದಸ್ಯ ಸ್ಥಾನಗಳಿಗೂ ಸೋಮವಾರ ಉಪ ಚುನಾವಣೆ ನಡೆಯಲಿದೆ.

ಚಿಕ್ಕಮಗಳೂರು, ತುಮಕೂರು ಜಿಲ್ಲೆಯ ಶಿರಾ, ಗದಗ– ಬೆಟಗೇರಿ, ಬೆಂಗಳೂರು ನಗರ ಜಿಲ್ಲೆಯ ಹೆಬ್ಬ
ಗೋಡಿ, ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಗರಸಭೆಗಳು, ವಿವಿಧ ಜಿಲ್ಲೆಗಳ 19 ಪುರಸಭೆಗಳು ಮತ್ತು 34 ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆಯುತ್ತಿದೆ. 1,185 ವಾರ್ಡ್‌ಗಳಲ್ಲಿ 4,961 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಉಪ ಚುನಾವಣೆ ನಡೆಯುತ್ತಿರುವ ಎಂಟು ಕ್ಷೇತ್ರಗಳಲ್ಲಿ 37 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಸೋಮವಾರ ಬೆಳಿಗ್ಗೆ 7ರಿಂದ ಸಂಜೆ 5ರವರೆಗೂ ಮತದಾನ ನಡೆಯಲಿದೆ. ಅಗತ್ಯವಿದ್ದಲ್ಲಿ ಬುಧವಾರ (ಡಿಸೆಂಬರ್‌ 29) ಮರು ಮತದಾನ ನಡೆಯಲಿದೆ. ಗುರುವಾರ (ಡಿ.30) ಬೆಳಿಗ್ಗೆ 8 ರಿಂದ ಮತ ಎಣಿಕೆ ನಡೆಯಲಿದೆ.

ಚುನಾವಣೆ ನಡೆಯುತ್ತಿರುವ ಎಲ್ಲ ಜಿಲ್ಲೆಗಳಲ್ಲಿ ಆಯಾ ತಾಲ್ಲೂಕು ಕೇಂದ್ರಗಳ ಮಸ್ಟರಿಂಗ್‌ ಕೇಂದ್ರಗಳಿಂದ ಚುನಾವಣಾ ಸಿಬ್ಬಂದಿ ಭಾನುವಾರವೇ ಮತಗಟ್ಟೆಗಳಿಗೆ ತೆರಳಿದ್ದಾರೆ. ಮತಗಟ್ಟೆಗಳಿಗೆ ಬಿಗಿ ಭದ್ರತೆ ಒದಗಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT