ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಪರಿಷತ್ ಚುನಾವಣೆ: ಮತದಾನ ಬಹುತೇಕ ಶಾಂತಿಯುತ

ಕೆಲವೆಡೆ ಮತಗಟ್ಟೆಗಳ ಬಳಿ ವಾಗ್ವಾದ
Last Updated 13 ಜೂನ್ 2022, 20:00 IST
ಅಕ್ಷರ ಗಾತ್ರ

ಹುಬ್ಬಳ್ಳಿ/ಬೆಳಗಾವಿ: ಹಣ ಹಂಚಿಕೆ ಆರೋಪ, ಮತದಾರರ ಮೇಲೆ ಪ್ರಭಾವ ಬೀರಲು ಯತ್ನಿಸಿದ ಮತಗಟ್ಟೆ ಅಧಿಕಾರಿಗಳು, ಮತಗಟ್ಟೆ ಪ್ರವೇಶಿಸಿದ ಶಾಸಕ ಹಾಗೂ ಅಧಿಕಾರಿಗಳೊಂದಿಗೆ ವಾಗ್ವಾದದಂತಹ ಘಟನೆಗಳು ವಿಧಾನಪರಿಷತ್‌ನ ಪಶ್ಚಿಮ ಶಿಕ್ಷಕರ ಕ್ಷೇತ್ರ, ವಾಯವ್ಯ ಪದವೀಧರರ ಹಾಗೂ ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಸೋಮವಾರ ನಡೆದಿವೆ. ಉಳಿದಂತೆ ಮತದಾನವು ಶಾಂತಿಯುತವಾಗಿತ್ತು.

ಪಶ್ಚಿಮ ಶಿಕ್ಷಕರ ಕ್ಷೇತ್ರ: ‘ಮತದಾರರ ಮೇಲೆ ಪ್ರಭಾವ ಬೀರುತ್ತಿದ್ದಾರೆ’ ಎಂಬ ಆರೋಪದ ಮೇಲೆ ಹುಬ್ಬ
ಳ್ಳಿಯ ಮತಗಟ್ಟೆ- 26ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮತಗಟ್ಟೆ ಅಧಿಕಾರಿ ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಯನ್ನು ಬದಲಾಯಿಸಲಾಯಿತು. ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅಧಿಕಾರಿಗಳ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು. ಹೊರಟ್ಟಿ ಪುತ್ರ ವಸಂತ ಹೊರಟ್ಟಿ ಹಾಗೂ ಬೆಂಬಲಿಗರು ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದರು.

ಶಿಕ್ಷಕ ಶಶಿಧರ ಗಾಜಿ ಎಂಬುವರು ಹೊರಟ್ಟಿ ಅವರ ಭಾವಚಿತ್ರದ ಬ್ಯಾಡ್ಜ್ ಧರಿಸಿಹುಬ್ಬಳ್ಳಿಯ
ಮತಗಟ್ಟೆಯೊಂದಕ್ಕೆ ಬಂದಾಗ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT