ಮಂಗಳವಾರ, ಮಾರ್ಚ್ 28, 2023
33 °C

ಹೈಕಮಾಂಡ್‌ ಸೂಚನೆಯಂತೆ ಅಧಿಕಾರ ಹಸ್ತಾಂತರ: ರಕ್ಷಾ ರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ‘ಹೈಕಮಾಂಡ್ ಸೂಚನೆಯಂತೆ ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ವಹಿಸಿಕೊಂಡಿದ್ದೆ. ಈಗ ಮುಹಮ್ಮದ್ ನಲಪಾಡ್‌ಗೆ ಅಧಿಕಾರ ಹಸ್ತಾಂತರಿಸುವಂತೆ ಹೈಕಮಾಂಡ್‌ ಸೂಚಿಸಿದೆ. ಅದರಂತೆ ನಡೆಯುತ್ತೇನೆ’ ಎಂದು ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ರಕ್ಷಾ ರಾಮಯ್ಯ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನ ಹಾಗೂ ನಲಪಾಡ್ ನಡುವೆ ಭಿನ್ನಮತವಿಲ್ಲ. 12 ವರ್ಷಗಳಿಂದ ಸ್ನೇಹಿತರಾಗಿದ್ದೇವೆ. ನಮ್ಮೊಳಗೆ ಬಣವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ಯುವಕರನ್ನು ಸೆಳೆಯಲು ಅಭಿಯಾನ ಆರಂಭಿಸಲಿದ್ದೇವೆ’
ಎಂದರು.

ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದು ಮುಹಮ್ಮದ್ ನಲಪಾಡ್ ಬಾಯಿತಪ್ಪಿ ಹೇಳಿರಬಹುದು ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು