ಸಮಗ್ರ ಉದ್ಯೋಗ ನೀತಿ; ಚಿಕ್ಕಬಳ್ಳಾಪುರದಲ್ಲಿ ಚರ್ಮದ ಬೊಂಬೆ ತಯಾರಿಕೆಗೆ ಆದ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022–23ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ವೇತನ, ವಹಿವಾಟು, ಉದ್ಯೋಗ ಮತ್ತು ರಫ್ತು ಹೆಚ್ಚಳ ಗುರಿಯೊಂದಿಗೆ ಚಿಕ್ಕಬಳ್ಳಾಪುರದಲ್ಲಿ ಚರ್ಮದ ಬೊಂಬೆ, ಧಾರವಾಡದಲ್ಲಿ ಕಸೂತಿ, ಕೊಪ್ಪಳದಲ್ಲಿ ಕೌದಿ ಮತ್ತು ಕಿನ್ಹಾಳ ಬೊಂಬೆ, ಮೈಸೂರಿನಲ್ಲಿ ಅಗರಬತ್ತಿ ತಯಾರಿಕೆಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ನವಲಗುಂದದಲ್ಲಿ ಜಮಖಾನಾ, ಚನ್ನಪಟ್ಟಣದಲ್ಲಿ ಆಟಿಕೆ ಹಾಗೂ ಇಳಕಲ್, ಗುಳೇದಗುಡ್ಡ, ಬೆಳಗಾವಿ- ಶಹಾಪುರ, ಶಿಡ್ಲಘಟ್ಟ ಮತ್ತು ಮೊಳಕಾಲ್ಮೂರಿನಲ್ಲಿ ಸೀರೆ ಮೈಕ್ರೊಕ್ಲಸ್ಟರ್ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Karnataka Budget Live Updates: ಯಾವುದೇ ತೆರಿಗೆ ಹೆಚ್ಚಳ ಇಲ್ಲ
ಉದ್ಯೋಗ ಸೃಜನೆಗೆ ಒತ್ತು ನೀಡುವ ಸಮಗ್ರ ಉದ್ಯೋಗ ನೀತಿ ಜಾರಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಹೆಚ್ಚಿನ ಉದ್ಯೋಗ ನೀಡುವ ಕೈಗಾರಿಕೆಗಳಿಗೆ ಹೆಚ್ಚುವರಿ ಪ್ರೋತ್ಸಾಹ ನೀಡುವ ಜೊತೆಗೆ, ಜವಳಿ, ಆಟಿಕೆ ತಯಾರಿಕೆ, ಎಪ್ಎಂಸಿಜಿ, ಚರ್ಮ ಉತ್ಪನ್ನಗಳು, ಆಹಾರ ಸಂಸ್ಕರಣೆ ಮತ್ತು ಆಭರಣ ವಲಯಗಳಿಗೆ ಹೂಡಿಕೆದಾರರನ್ನು ಆಕರ್ಷಿಸಲು ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.
ನವ ಕರ್ನಾಟಕ ನಿರ್ಮಾಣಕ್ಕಾಗಿ ಪ್ರತಿ ವಿಭಾಗದಲ್ಲಿ ತಲಾ ಒಂದು ಯೋಜನಾಬದ್ಧ ಪರಿಸರಸ್ನೇಹಿ ನವನಗರ (integrated township) ಅಭಿವೃದ್ಧಿ ಮಾಡಲಾಗುವುದು. ರಾಜ್ಯದಲ್ಲಿ ದೊಡ್ಡ ಗಾತ್ರದ ಹೂಡಿಕೆ ಪ್ರದೇಶಗಳು ಮತ್ತು ಕೈಗಾರಿಕಾ ವಸಾಹತುಗಳ ಸ್ಥಾಪನೆ, ಕಾರ್ಯಾಚರಣೆ, ನಿಯಂತ್ರಣ ಮತ್ತು ನಿರ್ವಹಣೆಗಾಗಿ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಅಧಿನಿಯಮ ರಚಿಸಲಾಗುವುದು. ತುಮಕೂರು ಮತ್ತು ಧಾರವಾಡ ಜಿಲ್ಲೆಗಳಲ್ಲಿ ವಿಶೇಷ ಹೂಡಿಕೆ ಪ್ರದೇಶ ಅಧಿಸೂಚನೆ ಹೊರಡಿಸಲಾಗುವುದು ಎಂದಿದ್ದಾರೆ.
ಇನ್ನಷ್ಟು...
Karnataka Budget: ಬೊಮ್ಮಾಯಿ ಬಜೆಟ್ನಲ್ಲಿ ಏನೇನಿದೆ? ಇಲ್ಲಿವೆ ಮುಖ್ಯಾಂಶಗಳು
ಯುಪಿಎಸ್ಸಿ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಉಚಿತ ‘ಆನ್ಲೈನ್ ಕೋಚಿಂಗ್’
ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ
ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ
ರಾಜ್ಯ ಬಜೆಟ್: ನವ ಭಾರತಕ್ಕಾಗಿ ನವಕರ್ನಾಟಕ: ರಾಜ್ಯ ಅಭಿವೃದ್ಧಿಗೆ ಪಂಚಸೂತ್ರಗಳು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.