ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಕೆ. ಮೋಹನ್‍ದೇವ್ ಆಳ್ವ ಹಾಗೂ ಡಾ.ಎಂ.ಕೆ. ಶೈಲಜಾ ಆಳ್ವ ದತ್ತಿ ಪ್ರಶಸ್ತಿ’ಗೆ ಗಾಯಕರಾದ ಬಿ.ಕೆ. ಸುಮಿತ್ರಾ ಹಾಗೂ ಪ್ರೊ.ಟಿ.ಎನ್. ಪದ್ಮಾ ಆಯ್ಕೆಯಾಗಿದ್ದಾರೆ.
‘ಟಿ. ಗಿರಿಜಾ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಲೇಖಕಿ ಅಕ್ಕ ಗಂಗಾಂಬಿಕಾ ಪಾಟೀಲ ಭಾಜನರಾಗಿದ್ದಾರೆ. ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ಗುರುವಾರ ಈ ಆಯ್ಕೆಗಳು ನಡೆದಿವೆ.
‘ಕೆ. ಮೋಹನ್‍ದೇವ್ ಆಳ್ವ ಹಾಗೂ ಡಾ.ಎಂ.ಕೆ. ಶೈಲಜಾ ಆಳ್ವ ದತ್ತಿ ಪ್ರಶಸ್ತಿ’ಯು ತಲಾ ₹ 30 ಸಾವಿರ ನಗದು ಹಾಗೂ ‘ಟಿ. ಗಿರಿಜಾ ಸಾಹಿತ್ಯ ದತ್ತಿ ಪ್ರಶಸ್ತಿ’ಯು ₹ 15 ಸಾವಿರ ನಗದು ಒಳಗೊಂಡಿದೆ ಎಂದು ಪ್ರಕಟಣೆಯಲ್ಲಿ ಪರಿಷತ್ತಿನ ಗೌರವ ಕಾರ್ಯದರ್ಶಿ ಕೆ. ರಾಜಕುಮಾರ್ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.