ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರದಿಂದ ತಾರತಮ್ಯ ಧೋರಣೆ: ಮನು ಬಳಿಗಾರ್ ಆಕ್ರೋಶ

ಕಸಾಪ ನಿಕಟಪೂರ್ವ ಅಧ್ಯಕ್ಷ ಮನು ಬಳಿಗಾರ್ ಆಕ್ರೋಶ
Last Updated 12 ಜನವರಿ 2022, 17:16 IST
ಅಕ್ಷರ ಗಾತ್ರ

ಬೆಂಗಳೂರು: ‘ನೆರೆಯ ರಾಜ್ಯಗಳಿಗೆ ಭರಪೂರ ಕೊಡುಗೆಗಳನ್ನು ನೀಡುತ್ತಿರುವ ಕೇಂದ್ರ ಸರ್ಕಾರ, ಕರ್ನಾಟಕದಬಗ್ಗೆ ತಾರತಮ್ಯಧೋರಣೆ ತಾಳುತ್ತಿದೆ. ಈಗಲಾದರೂ ಮೈಸೂರಿನ ಕನ್ನಡ ಉನ್ನತ ಅಧ್ಯಯನ ಕೇಂದ್ರಕ್ಕೆ ವಾರ್ಷಿಕ ₹ 10 ಕೋಟಿ‌ ಅನುದಾನ‌ವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ನಿಕಟಪೂರ್ವ ಅಧ್ಯಕ್ಷ ಮನು ಬಳಿಗಾರ್ ಆಗ್ರಹಿಸಿದ್ದಾರೆ.

‘ಕೇಂದ್ರ ಸರ್ಕಾರ ತಮಿಳುನಾಡಿನಲ್ಲಿ ನಿರ್ಮಿಸಿರುವ 11 ನೂತನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ತಮಿಳು ಶಾಸ್ತ್ರೀಯ ಅಧ್ಯಯನದ ಕೇಂದ್ರೀಯ ಸಂಸ್ಥೆಯ ಕ್ಯಾಂಪಸ್‌ಗೆ ಬುಧವಾರ ಚಾಲನೆ ದೊರೆತಿದೆ. ತಮಿಳುನಾಡಿನಲ್ಲಿಬಿಜೆಪಿಯಿಂದ ಒಬ್ಬರು ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಇಲ್ಲಿಂದ25 ಮಂದಿಯನ್ನು ಕಳುಹಿಸಲಾಗಿದೆ. ಆದರೆ,ಕೇಂದ್ರ ಸರ್ಕಾರ ಇಲ್ಲಿಗೆ ಅಂತಹ ಕೊಡುಗೆ ನೀಡಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ರಾಜ್ಯದಿಂದ ಲೋಕಸಭೆಗೆ ಆಯ್ಕೆಯಾದ ಸಂಸದರು ತಾರತಮ್ಯದ ಬಗ್ಗೆಧ್ವನಿ ಎತ್ತದೆ ಇರುವುದು ವಿಷಾದನೀಯ.ಮೈಸೂರಿನ ಕೇಂದ್ರೀಯ ಭಾಷಾ ಸಂಸ್ಥಾನದ (ಸಿಐಐಎಲ್) ಉನ್ನತ ಕನ್ನಡ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತ ಸ್ಥಾನಮಾನ‌ ಕೊಡಬೇಕೆಂದು ಪರಿಷತ್ತಿನ ಅಧ್ಯಕ್ಷನಾಗಿದ್ದ ಅವಧಿಯಲ್ಲಿ ಕೇಂದ್ರ ಸರ್ಕಾರಕ್ಕೆ ಅನೇಕ ಬಾರಿ ಆಗ್ರಹಿಸಿದ್ದೆ. ಆದರೆ, ಕೇಂದ್ರ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT