ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಧ್ವಜ ದಹನ: ಕಸಾಪ ಖಂಡನೆ

Last Updated 18 ಡಿಸೆಂಬರ್ 2021, 5:25 IST
ಅಕ್ಷರ ಗಾತ್ರ

ಬೆಂಗಳೂರು:ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡದ ಬಾವುಟಕ್ಕೆ ಬೆಂಕಿ ಹಚ್ಚಿರುವ ಘಟನೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಖಂಡಿಸಿದೆ.

‘ಘಟನೆ ಬಗ್ಗೆ ಮಹಾರಾಷ್ಟ್ರ ಸರ್ಕಾರ ವಿಷಾದ ವ್ಯಕ್ತಪಡಿಸಿಲ್ಲ. ದುಷ್ಕೃತ್ಯ ಎಸಗಿದವರ ಮೇಲೆ ಕ್ರಮವನ್ನೂ ಕೈಗೊಂಡಿಲ್ಲ. ಕನ್ನಡದ ಬಾವುಟದ ಬಗೆಗೆ ಕನ್ನಡಿಗರಿಗೆ ಆರಾಧ್ಯ ಭಾವನೆ ಇದೆ. ಹೀಗಾಗಿ ಮಹಾರಾಷ್ಟ್ರ ಸರ್ಕಾರ ಕೂಡಲೇ ಎಂ.ಇ.ಎಸ್‌.ಪುಂಡರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

‘ಕನ್ನಡಿಗರ ಭಾವನೆಗಳಿಗೆ ಕೊಳ್ಳಿ ಇಡಲು ಹೊರಟಿದ್ದ ಬೆಳಗಾವಿಯ ಕೆಲವು ಎಂ.ಇ.ಎಸ್‌.‍ಮುಖಂಡರ ಮುಖಕ್ಕೆ ಮಸಿ ಬಳಿದಿದ್ದಾರೆಂದು ಆರೋಪಿ ರಾಜ್ಯದ ಪೊಲೀಸರು ಕನ್ನಡ ಚಳವಳಿಗಾರರನ್ನು ಬಂಧಿಸಿದ್ದಾರೆ. ಅವರ ಮೇಲೆ ಮೊಕದ್ದಮೆ ದಾಖಲಿಸಲಾಗಿದೆ. ಅವರನ್ನು ಕೂಡಲೇ ಬಿಡುಗಡೆ ಮಾಡಿ, ಮೊಕದ್ದಮೆ ಹಿಂದಕ್ಕೆ ಪಡೆಯಬೇಕು’ ಎಂದೂ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT