ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಕಾರ್ಯಕಾರಿ ಸಮಿತಿ ಅಧಿಕಾರದ ಅವಧಿ ವಿಸ್ತರಣೆ ನಿರ್ಣಯ ವಿರೋಧಿಸಿ ಹೈಕೋರ್ಟ್‌ಗೆ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಅರ್ಜಿದಾರರು ಹಿಂಪಡೆದಿದ್ದು, ಅಧ್ಯಕ್ಷರ ಚುನಾವಣೆಗೆ ಇದ್ದ ತೊಡಕು ನಿವಾರಣೆಯಾದಂತಾಗಿದೆ.
ಹಾಲಿ ಕಾರ್ಯಕಾರಿ ಸಮಿತಿ ಬೈಲಾಗೆ ತಿದ್ದುಪಡಿ ತಂದು ಅಧಿಕಾರವಧಿಯನ್ನು 3 ರಿಂದ 5 ವರ್ಷಗಳಿಗೆ ವಿಸ್ತರಿಸಿಕೊಂಡಿತ್ತು. ಇದನ್ನು ಪ್ರಶ್ನಿಸಿ
ಕನ್ನಡ ಸಂಘರ್ಷ ಸಮಿತಿ ಅಧ್ಯಕ್ಷ ಕೋ.ವೆಂ. ರಾಮಕೃಷ್ಣೇಗೌಡ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ತಿದ್ದುಪಡಿ ಪ್ರಕಾರ ಅಧ್ಯಕ್ಷರ ಅಧಿಕಾರದ ಅವಧಿ 2021ರ ಮಾರ್ಚ್‌ಗೆ ಅಂತ್ಯವಾಗಲಿದೆ. ಆದರೆ, ಬೈಲಾದ ಪ್ರಕಾರ ಅನಿವಾರ್ಯ ಸ್ಥಿತಿಯಲ್ಲಿ ಕಾರ್ಯಕಾರಿ ಸಮಿತಿಯ ಅವಧಿಯನ್ನು 6 ತಿಂಗಳು ವಿಸ್ತರಿಸಿಕೊಳ್ಳಲು ಸಮಿತಿಗೆ ಅವಕಾಶವಿದೆ.
‘ಅರ್ಜಿಯನ್ನು ಪರಿಷತ್ತಿನ ಹಿತದೃಷ್ಟಿ
ಯಿಂದ ಹಿಂದಕ್ಕೆ ಪಡೆದುಕೊಂಡಿದ್ದೇನೆ. ಈಗ ಚುನಾವಣೆಗೆ ದಾರಿ ಸುಗಮ
ವಾಗಿದೆ. ಕೂಡಲೇ ಚುನಾವಣೆ ಪ್ರಕ್ರಿಯೆ ಪ್ರಾರಂಭಿಸಬೇಕು’ ಎಂದು ಕೋ.ವೆಂ. ರಾಮಕೃಷ್ಣೇಗೌಡ ಒತ್ತಾಯಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.