ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಸರಗೋಡಿನಿಂದ ಮಂಗಳೂರಿಗೆ ತೆರಳುವವರಿಗೆ ಆ್ಯಂಟಿಜೆನ್ ಪರೀಕ್ಷೆ ನಡೆಸಿ ಪಾಸ್: ಸಚಿವ

ಕಾಸರಗೋಡು–ದಕ್ಷಿಣ ಕನ್ನಡ ನಡುವೆ ಸಂಚಾರ
Last Updated 18 ಆಗಸ್ಟ್ 2020, 13:30 IST
ಅಕ್ಷರ ಗಾತ್ರ

ಮಂಗಳೂರು: ಕಾಸರಗೋಡಿನಿಂದ ಮಂಗಳೂರಿಗೆ ಪ್ರಯಾಣಿಸುವವರಿಗೆ ಇದೇ 19ರಿಂದ ತಲಪಾಡಿ ಗಡಿಯಲ್ಲಿ ಆ್ಯಂಟಿಜೆನ್ ಪರೀಕ್ಷೆ ನಡೆಸಿ ಪಾಸ್ ನೀಡಲಾಗುವುದು ಎಂದು ಕಾಸರಗೋಡು ಜಿಲ್ಲಾ ಉಸ್ತುವಾರಿ ಸಚಿವ ಇ. ಚಂದ್ರಶೇಖರನ್ ತಿಳಿಸಿದ್ದಾರೆ.

ಜಿಲ್ಲೆಯ ಉಳಿದ ಗಡಿ ರಸ್ತೆಗಳಲ್ಲಿ ಶೀಘ್ರವೇ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದೂ ಅವರು ತಿಳಿಸಿದ್ದಾರೆ .

‘ಪಾಸ್ ಲಭಿಸಿದವರು ಪ್ರತಿ ವಾರಕ್ಕೊಮ್ಮೆ ಆ್ಯಂಟಿಜೆನ್‌ ತಪಾಸಣೆ ನಡೆಸಬೇಕು. ತಪಾಸಣೆ ನಡೆಸಿದ ಕೆಲವೇ ನಿಮಿಷಗಳಲ್ಲಿ ಅಂತರರಾಜ್ಯ ಸಂಚಾರಕ್ಕೆ ಪಾಸ್ ಲಭಿಸಲಿದೆ. ಬೇಡಿಕೆಗಳು ಬಂದ ಹಿನ್ನಲೆಯಲ್ಲಿ ಜಿಲ್ಲಾಡಳಿತವು ಆರೋಗ್ಯ ಇಲಾಖೆ , ಪೊಲೀಸರ ಸಹಕಾರದೊಂದಿಗೆ ಈ ವ್ಯವಸ್ಥೆ ಕಲ್ಪಿಸುತ್ತಿದೆ. ತಲಪಾಡಿ ಮಾತ್ರವಲ್ಲದೇ, ಜಾಲ್ಸೂರು, ಪೆರ್ಲ, ಪಾಣತ್ತೂರು, ಬೆಳ್ಳೂರು, ಬಂದಡ್ಕ ಹಾಗೂ ಗಡಿ ಪ್ರದೇಶದಲ್ಲಿ ಸಂಚಾರಕ್ಕೆ ಅನುಕೂಲವಾಗುವಂತೆ ಅನುಮತಿ ನೀಡಲಾಗುವುದು’ ಎಂದು ಅವರು ತಿಳಿಸಿದರು.

‘ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ನಡುವಿನ ಸಂಚಾರವು ಕಾನೂನು ನಿರ್ಬಂಧ, ರಾಜಕೀಯ ಹೋರಾಟಕ್ಕೆ ಕಾರಣವಾಗುತ್ತಿದ್ದು, ಗಡಿ ಪ್ರದೇಶದಲ್ಲಿನ ಜನತೆ ಬದುಕು ಅಡಕತ್ತರಿಯಲ್ಲಿ ಸಿಲುಕಿದಂತಾಗಿತ್ತು. ಇದರಿಂದ ಎರಡು ರಾಜ್ಯಗಳ ನಡುವೆ ಸಂಚಾರಕ್ಕೆ ಅನುಮತಿ ನೀಡಬೇಕು’ ಎಂಬ ಬೇಡಿಕೆ ಕೇಳಿಬಂದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT