ಮಂಗಳವಾರ, ಸೆಪ್ಟೆಂಬರ್ 29, 2020
23 °C

ಅಯೋಧ್ಯೆಯಂತೆ ಕಾಶಿ, ಮಥುರಾಗಳಲ್ಲೂ ಮಸೀದಿಗಳನ್ನು ತೆರವುಗೊಳಿಸಬೇಕಿದೆ: ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಅಯೋಧ್ಯೆಯಂತೆ ಮಥುರಾ, ಕಾಶಿಗಳಲ್ಲೂ ಮಸೀದಿಗಳನ್ನು ತೆರವುಗೊಳಿಸಿ, ಮಂದಿರಗಳನ್ನು ಸ್ವತಂತ್ರಗೊಳಿಸಬೇಕಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. 

ಅಯೋಧ್ಯೆಯ ರಾಮಮಂದಿರ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮದ ನಿಮಿತ್ತ ಇಲ್ಲಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಧರ್ಮಸಭೆಯಲ್ಲಿ ಅವರು ಮಾತನಾಡಿದರು.

ಕಾಶಿ ವಿಶ್ವನಾಥ, ಮಥುರಾ ಶ್ರೀಕೃಷ್ಣ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ತೆರಳಿದರೆ ಹಿಂದೂಗಳ ಗುಲಾಮತನ ಭಾಸವಾಗುತ್ತದೆ. ಅಲ್ಲಿ ಭಕ್ತಿಯಿಂದ ಪೂಜೆ ಸಲ್ಲಿಸಲೂ ಆಗದ ಸ್ಥಿತಿ ಇದೆ. ಅಲ್ಲಿರುವ ಮಸೀದಿಗಳು ಅಂತಹ ಮನೋಸ್ಥಿತಿ ಬಿಂಬಿಸುತ್ತವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿನ ಹಲವು ದೇವಸ್ಥಾನಗಳು ಧ್ವಂಸವಾಗಿವೆ. ಗುಲಾಮಗಿರಿಯ ಸಂತೇತವಾದ ಅಯೋಧ್ಯೆಯ ಮಸೀದಿ ತೆರವುಗೊಳಿಸಿದಂತೆ ಅಲ್ಲಿನ ಮಸೀದಿಗಳನ್ನು ತೆರವುಗೊಳಿಸಬೇಕಿದೆ. ಎಲ್ಲಾ ಶ್ರದ್ಧಾ ಕೇಂದ್ರಗಳೂ ಮಸೀದಿಗಳಿಂದ ಮುಕ್ತವಾಗಬೇಕಿದೆ ಎಂದರು.

‘ಲಾಠಿ ಗೋಲಿ ಖಾಯೆಂಗೆ ಮಂದೀರ್ ವಹೀ ಬನಾಯೇಂಗೆ’ ಎಂದು ಹೇಳಿದ್ದ ರೀತಿಯೇ ಇಂದು ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣವಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು