ಮಂಗಳವಾರ, ಡಿಸೆಂಬರ್ 1, 2020
17 °C

‘ವಿದ್ಯುತ್ ದರ ಹೆಚ್ಚಳ ಬೇಡ’-ಕಾಸಿಯಾ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ವಿದ್ಯುತ್ ದರ ಹೆಚ್ಚಳ ನಿರ್ಧಾರವನ್ನು ಸರ್ಕಾರ ಹಿಂತೆಗೆದುಕೊಳ್ಳುವಂತೆ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಮನವಿ ಮಾಡಿದೆ.

ಕಾಸಿಯಾ ಅಧ್ಯಕ್ಷ ಕೆ.ಬಿ.ಅರಸಪ್ಪ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಭೇಟಿಯಾಗಿ ಮನವಿ ಸಲ್ಲಿಸಿತು.

‘ವಿದ್ಯುತ್ ದರವನ್ನು ಪ್ರತಿ ಯೂನಿಟ್‍ಗೆ 20 ಪೈಸೆಯಿಂದ 40 ಪೈಸೆಗೆ ಹೆಚ್ಚಿಸಲು ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ (ಕೆಇಆರ್‌ಸಿ) ಅನುಮತಿ ನೀಡಿರುವುದರಿಂದ ಸಣ್ಣ ಮತ್ತು ಮಧ್ಯಮ (ಎಂಎಸ್‌ಎಂಇ) ಕೈಗಾರಿಕೆಗಳು ‌ ಆಘಾತಕ್ಕೊಳಗಾಗಿವೆ. ಕೊರೊನಾದಿಂದ ನಲುಗಿ, ಈಗ ತಾನೇ ಚೇತರಿಸಿಕೊಳ್ಳುತ್ತಿರುವ ಕೈಗಾರಿಕೆಗಳಿಗೆ ಈ ನಿರ್ಧಾರ ಮಾರಕವಾಗಲಿದೆ' ಎಂದು ಕೆ.ಬಿ.ಅರಸಪ್ಪ ಕಳವಳ ವ್ಯಕ್ತಪಡಿಸಿದರು.

‘ವಸತಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಕೈಗಾರಿಕೆಗಳ ಸ್ಥಳಾಂತರ ಕಷ್ಟಸಾಧ್ಯ. ಸದರಿ ಕೈಗಾರಿಕೆಗಳನ್ನು ಸ್ಥಳಾಂತರಿಸಲು ಅನುಕೂಲವಾಗುವಂತೆ ಬೆಂಗಳೂರು ಸುತ್ತಮುತ್ತ ಹೊಸ ಕೈಗಾರಿಕಾ ವಸಾಹತು ಸ್ಥಾಪಿಸುವ ಕುರಿತು ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು' ಎಂದರು.

‘ಕೈಗಾರಿಕಾ ನೀತಿ ಜಾರಿಗೆ ಬಂದು ಎರಡು ತಿಂಗಳು ಕಳೆದಿದ್ದರೂ, ಸಂಬಂಧಪಟ್ಟ ಇಲಾಖೆಗಳು ಅಧಿಸೂಚನೆ ಹೊರಡಿ
ಸಿಲ್ಲ. ಇದರಿಂದ ಕೈಗಾರಿಕಾ ನೀತಿಯಲ್ಲಿ ಜಾರಿಗೊಳಿಸಲಾದ ರಿಯಾಯಿತಿ ಮತ್ತು ಪ್ರಯೋಜನಗಳನ್ನು ಕೈಗಾರಿಕೋದ್ಯಮಿ
ಗಳು ಪಡೆಯಲು ಸಾಧ್ಯವಾಗುತ್ತಿಲ್ಲ. ಕಂದಾಯ, ವಿದ್ಯುತ್ ಮತ್ತು ಇತರೆ ಇಲಾಖೆಗಳು ತ್ವರಿತವಾಗಿ ಅಧಿಸೂಚನೆಗಳನ್ನು ಹೊರಡಿಸಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು