ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸ್ತೂರಿ ರಂಗನ್ ವರದಿ ಜಾರಿಗೆ ತರಾತುರಿ ಬೇಡ

ಸಿ.ಎಂ ಸೇರಿದಂತೆ ಪ್ರಮುಖ ಮುಖಂಡರನ್ನು ಭೇಟಿ ಮಾಡಿದ ನಿಯೋಗ
Last Updated 10 ಡಿಸೆಂಬರ್ 2020, 13:48 IST
ಅಕ್ಷರ ಗಾತ್ರ

ಮಡಿಕೇರಿ: ಪಶ್ಚಿಮಘಟ್ಟ ವ್ಯಾಪ್ತಿಯ ಜನರಿಗೆ ಮಾರಕವಾಗಿ ಪರಿಣಮಿಸಲಿರುವ ಡಾ.ಕಸ್ತೂರಿ ರಂಗನ್ ವರದಿಯನ್ನು ರಾಜ್ಯದಲ್ಲಿ ಅನುಷ್ಠಾನಕ್ಕೆ ತರಾತುರಿ ತೋರದೆ ವರದಿಯಿಂದ ಆಗುವ ಸಾಧಕ ಬಾಧಕಗಳನ್ನು ಮತ್ತಷ್ಟು ಸಮಗ್ರವಾಗಿ ಪರಿಶೀಲಿಸುವಂತೆ ಕರ್ನಾಟಕ ಬೆಳೆಗಾರರ ಒಕ್ಕೂಟದ ನೇತೖತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಸಚಿವರು, ಶಾಸಕರಿಗೆ ಮನವಿ ಮಾಡಿದೆ. ಸರ್ಕಾರದಿಂದ ಸಕಾರಾತ್ಮಕ ಸ್ಪಂದನ ದೊರಕಿದೆ ಎಂದು ಮುಖಂಡರು ತಿಳಿಸಿದ್ದಾರೆ.

ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗವು ಬೆಂಗಳೂರಿನ ವಿಧಾನಸೌಧದಲ್ಲಿ ಒಕ್ಕೂಟದ ಅಧ್ಯಕ್ಷ ಡಾ.ಎಚ್.ಟಿ.ಮೋಹನ್ ಕುಮಾರ್ ನೇತೃತ್ವದಲ್ಲಿ ಶಾಸಕರಾದ ಅರಗ ಜ್ಞಾನೇಂದ್ರ, ಮಾಜಿ ಶಾಸಕರಾದ ಎಚ್.ಎಂ.ವಿಶ್ವನಾಥ್ ಸಹಯೋಗದೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ, ವಿಧಾನಸಭಾ ಸಭಾಪತಿ ವಿಶ್ವೇಶ್ವರ ಹೆಗ್ಗಡೆ ಕಾಗೇರಿ, ಸಚಿವರಾದ ಆರ್.ಅಶೋಕ್ ಮತ್ತು ಗೋಪಾಲಯ್ಯ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವ ಜಗದೀಶ್ ಶೆಟ್ಟರ್, ಶಾಸಕರಾದ ಸಿ.ಟಿ.ರವಿ, ಎಂ.ಪಿ.ಅಪ್ಪಚ್ಚು ರಂಜನ್, ಎಚ್.ಕೆ.ಕುಮಾರಸ್ವಾಮಿ, ಟಿ.ಡಿ.ರಾಜೇಗೌಡ, ಸರ್ಕಾರದ ಮುಖ್ಯ ಕಾರ್ಯದಶಿ೯ ಟಿ.ಎಂ ವಿಜಯಭಾಸ್ಕರ್, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ಅವರನ್ನು ಭೇಟಿ ಮಾಡಿ, ತಮ್ಮ ಅಹವಾಲು ತಿಳಿಸಿತು.

ಡಾ.ಕಸ್ತೂರಿ ರಂಗನ್ ವರದಿಯನ್ನು ಶೀಘ್ರದಲ್ಲೇ ಅನುಷ್ಠಾನಗೊಳಿಸದೇ ಈ ವರದಿಯ ಸಾಧಕ-ಭಾದಕಗಳನ್ನು ತಿಳಿದುಕೊಂಡು ಜನಪ್ರತಿನಿಧಿಗಳು, ಕಾಫಿ ಬೆಳೆಗಾರರು, ಬೆಳೆಗಾರ ಸಂಘಟನೆಯ ಮುಖಂಡರು ಹಾಗೂ ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳನ್ನೊಳಗೊಂಡ ಸಭೆಗಳನ್ನು ನಡೆಸಿ ಪ್ರತಿಯೊಂದು ಗ್ರಾಮ ವ್ಯಾಪ್ತಿಯಲ್ಲಿ ಉಲ್ಲೇಖವಾಗಿರುವ ಪ್ರದೇಶಗಳನ್ನು ಖುದ್ದಾಗಿ ಪರಿಶೀಲಿಸಿ ಪರಿಷ್ಕೃತ ಪಟ್ಟಿಯನ್ನು ಸಲ್ಲಿಸಬೇಕು ಎಂದು ಕೋರಿದರು.

ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಸ್ಥಳೀಯ ಕೇರಳ ರಾಜ್ಯ ಮಾದರಿಯಲ್ಲಿ ಅಭಿಪ್ರಾಯ ಸಂಗ್ರಹಿಸಬೇಕು. ರೈತರ ಕೃಷಿ ಜಮೀನು, ವಾಸಸ್ಥಳಗಳನ್ನು ಸೂಕ್ಷ್ಮ ಪರಿಸರ ಪ್ರದೇಶಗಳ ಪಟ್ಟಿಯಿಂದ ಹೊರಗಿಡಬೇಕೆಂದು ಬೇಡಿಕೆ ಸಲ್ಲಿಸಿದರು.

ಕಸ್ತೂರಿ ರಂಗನ್ ವರದಿಯ ಬಗ್ಗೆ ಶಾಸಕ ಅರಗ ಜ್ಞಾನೇಂದ್ರ ಅವರು ಸದನದಲ್ಲಿ ಧ್ವನಿ ಎತ್ತಿದ್ದು, ರಾಜ್ಯದ ಗಮನ ಸೆಳೆದಿರುವುದು ಕನಾ೯ಟಕ ಬೆಳೆಗಾರರ ಒಕ್ಕೂಟದ ಹೋರಾಟಕ್ಕೆ ಸಕಾರಾತ್ಮಕ ಸ್ಪಂದನೆ ದೊರೆತಂತಾಗಿದೆ. ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ಕಾರ್ಕಳದ ಶಾಸಕ ಸುನೀಲ್ ಕುಮಾರ್, ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಕೂಡ, ಕಸ್ತೂರಿರಂಗನ್ ವರದಿಯ ಮಾಪಾ೯ಡಿಗಾಗಿ ಸಕಾ೯ರವನ್ನು ಒತ್ತಾಯಿಸಿದ್ದಾರೆ ಎಂದು ಮುಖಂಡರು ತಿಳಿಸಿದ್ದಾರೆ.

ಕೇರಳ ಸರ್ಕಾರ ಹೊರತಂದ ವರದಿಯ ಪರಿಷ್ಕೃತ ಪ್ರತಿಯನ್ನು ಮುಖ್ಯಮಂತ್ರಿ ಹಾಗೂ ಮುಖ್ಯ ಕಾರ್ಯದಶಿ೯ಗೆ ಸಲ್ಲಿಸಲಾಗಿದೆ.
ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಡಾ.ಎಚ್.ಟಿ.ಮೋಹನ್ ಕುಮಾರ್, ಉಪಾಧ್ಯಕ್ಷ ನಂದಾ ಬೆಳ್ಳಿಯಪ್ಪ, ಸಂಘಟನಾ ಕಾರ್ಯದಶಿ೯ ಕೆ.ಕೆ.ವಿಶ್ವನಾಥ್, ಖಜಾಂಚಿ ಎಂ.ಬಿ.ರಾಜೀವ್, ಸಹ್ಯಾದ್ರಿ ಬೆಳೆಗಾರರ ಸಂಘದ ಅಧ್ಯಕ್ಷ ರಂಗನಾಥ್, ಸಹ್ಯಾದ್ರಿ ಬೆಳೆಗಾರರ ಸಂಘದ ಮಾಜಿ ಅಧ್ಯಕ್ಷ ಎಂ.ಕೆ.ಸುಂದರೇಶ್, ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ನಿರ್ದೇಶಕ ಎಂ.ವಿ.ರತ್ನಾಕರ್ ಹಾಜರಿದ್ದರು ಎಂದು ಒಕ್ಕೂಟದ ಪ್ರಧಾನ ಕಾಯ೯ದಶಿ೯ ಕೆ.ಬಿ.ಕೖಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT