ಶುಕ್ರವಾರ, ಡಿಸೆಂಬರ್ 2, 2022
19 °C

ಕಾವೇರಿ ನಿಸರ್ಗಧಾಮದಲ್ಲಿ ತೂಗು ಸೇತುವೆ ದುರಸ್ತಿ: ಪ್ರವಾಸಿಗರಿಗೆ ಪ್ರವೇಶ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಶಾಲನಗರ (ಕೊಡಗು ಜಿಲ್ಲೆ): ಇಲ್ಲಿನ ಕಾವೇರಿ ನಿಸರ್ಗಧಾಮದ ತೂಗುಸೇತುವೆಯ ದುರಸ್ತಿ ಸಲುವಾಗಿ ನ.8ರಿಂದ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ. ದುರಸ್ತಿ ಬಳಿಕ ಪ್ರವೇಶ ನೀಡಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಶಿವರಾಮ್ ತಿಳಿಸಿದ್ದಾರೆ.

ಹಾರಂಗಿಯಲ್ಲಿ ನೂತನವಾಗಿ ಪ್ರಾರಂಭಿಸಿರುವ ಹಾರಂಗಿ ಸಸ್ಯೋದ್ಯಾನ ಹಾಗೂ ಸಾಕಾನೆ ಶಿಬಿರವು
ಪ್ರವಾಸಿಗರ ವೀಕ್ಷಣೆಗೆ ತೆರೆದಿರುತ್ತದೆ ಎಂದಿದ್ದಾರೆ.

ಗುಜರಾತ್‌ನಲ್ಲಿ ಈಚೆಗೆ ಸಂಭವಿಸಿದ ತೂಗು ಸೇತುವೆ ದುರಂತದಿಂದ ಅರಣ್ಯ ಇಲಾಖೆ ಎಚ್ಚೆತ್ತುಗೊಂಡಿದ್ದು, ದುರಸ್ತಿ ಕಾರ್ಯ ಕೈಗೆತ್ತಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು