ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟಿಸಿಲ್ಲ: ಕೆಇಎ

Last Updated 11 ಫೆಬ್ರುವರಿ 2022, 20:24 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟಪಡಿಸಿದೆ.

ಸ್ಪರ್ಧಾತ್ಮಕ ಪರೀಕ್ಷೆಯನ್ನು ಫೆ.26ರಿಂದ 28ರವರೆಗೆ ನಡೆಸಲು ಬೆಂಗಳೂರು, ಬೆಂಗಳೂರು ನಗರ, ಬೆಂಗಳೂರು ಉತ್ತರ, ಮೈಸೂರು, ಶಿವಮೊಗ್ಗ, ಧಾರವಾಡ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ, ಮಂಗಳೂರು ವಿಶ್ವವಿದ್ಯಾಲಯಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಹೀಗಾಗಿ, ಅಗತ್ಯ ಸೌಕರ್ಯಗಳು ಕಲ್ಪಿಸುವಂತೆ ಉನ್ನತ ಶಿಕ್ಷಣ ಇಲಾಖೆ ಕುಲಪತಿಗಳಿಗೆ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌.ರಮ್ಯಾ, ‘ಪ್ರಸ್ತಾವಿತ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ. ಈ ಬಗ್ಗೆ ಆಕ್ಷೇಪಗಳನ್ನು ಆಹ್ವಾನಿಸಲಾಗಿತ್ತು. ಆಕ್ಷೇಪಗಳನ್ನು ಪರಿಶೀಲಿಸಿ ಶೀಘ್ರ ಅಂತಿಮ ವೇಳಾಪಟ್ಟಿ
0ಪ್ರಕಟಿಸಲಾಗುವುದು’ ಎಂದು ತಿಳಿಸಿದ್ದಾರೆ.

ತಿಂಗಳು ಅವಕಾಶ ನೀಡಿ: ‘ವೇಳಾಪಟ್ಟಿಯನ್ನು ಒಂದು ತಿಂಗಳು ಮುಂಚಿತವಾಗಿಯೇ ಪ್ರಕಟಿಸಬೇಕು. ದಿಢೀರ್‌ ಪರೀಕ್ಷೆ ನಡೆಸಬಾರದು’ ಎಂದು ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ.

‘ಪರೀಕ್ಷೆಯನ್ನು ಡಿಸೆಂಬರ್‌ನಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಅಧಿಕೃತ ದಿನಾಂಕವನ್ನು ಪ್ರಕಟಿಸಿರಲಿಲ್ಲ. ಹೀಗಾಗಿ, ಪರೀಕ್ಷೆಗೆ ಸಜ್ಜಾಗಲು ಕೆಇಎ ಹೆಚ್ಚಿನ ಕಾಲಾವಕಾಶ ನೀಡಬೇಕು. ಆತುರವಾಗಿ ಪರೀಕ್ಷೆಗಳನ್ನು ನಡೆಸಬಾರದು’ ಎಂದುತಿಳಿಸಿದ್ದಾರೆ.

‘2016ರಲ್ಲಿ ನಡೆದ ಪರೀಕ್ಷೆಯಲ್ಲಿ ಲೋಪಗಳಾಗಿದ್ದವು. ಇತಿಹಾಸ ವಿಷಯದ ಪ್ರಶ್ನೆಪತ್ರಿಕೆಯಲ್ಲಿ ವೆಬ್‌ಸೈಟ್‌ನಿಂದ ಪ್ರಶ್ನೆಗಳನ್ನು ಯಥಾವತ್ತಾಗಿ ತೆಗೆದು ನೀಡಲಾಗಿತ್ತು. ಹೀಗಾಗಿ, ಈ ಬಾರಿಯಾದರೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲಿ’ ಎಂದು ಅಭ್ಯರ್ಥಿಯೊಬ್ಬರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT