ಸಿಇಟಿ: ಉಳಿಕೆ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ವಿವಿಧ ಸುತ್ತಿನ ಸೀಟು ಹಂಚಿಕೆ ಬಳಿಕ ಉಳಿಕೆಯಾಗಿರುವ ಹಾಗೂ ಕೆಲವು ಅಭ್ಯರ್ಥಿಗಳು ವಾಪಸ್ ನೀಡಿರುವ ಎಂಜಿನಿಯರಿಂಗ್ ಸೀಟುಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಸಾಂದರ್ಭಿಕ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ನಡೆಸಲಿದ್ದು, ಈ ಕುರಿತ ವೇಳಾಪಟ್ಟಿಯನ್ನು ಶುಕ್ರವಾರ ತನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಈ ಸುತ್ತಿನಲ್ಲಿ ಲಭ್ಯವಿರುವ ಸೀಟುಗಳಿಗೆ ಅಭ್ಯರ್ಥಿಗಳು ಹೊಸದಾಗಿ ತಮ್ಮ ಆಯ್ಕೆ ದಾಖಲಿಸಬೇಕು. ಈ ಹಿಂದೆ ದಾಖಲಿಸಿದ್ದ ಆಯ್ಕೆ ಪರಿಗಣನೆಗೆ ಬರುವುದಿಲ್ಲ. ಆಯ್ಕೆ ದಾಖಲಿಸಲು ಭಾನುವಾರ (ಜ.10) ಮಧ್ಯಾಹ್ನ 2 ಗಂಟೆವರೆಗೂ ಕಾಲಾವಕಾಶ ಇರುತ್ತದೆ. ಅಂದು ಸಂಜೆ 7 ಗಂಟೆಗೆ ತಾತ್ಕಾಲಿಕ ಸೀಟು ಹಂಚಿಕೆ ಪ್ರಕಟವಾಗಲಿದೆ.
ನಂತರ ಜ.12ರ ಮಧ್ಯಾಹ್ನ 2 ಗಂಟೆಯೊಳಗೆ ಅಭ್ಯರ್ಥಿಗಳು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಕೆಇಎಗೆ ಶುಲ್ಕ ಪಾವತಿಸುವ ಜೊತೆಗೆ ತಮ್ಮ ಮೂಲ ದಾಖಲೆಗಳನ್ನು ಸಲ್ಲಿಸಬೇಕು. ಶುಲ್ಕ ಪಾವತಿಸಿದ ಹಾಗೂ ದಾಖಲೆ ಸಲ್ಲಿಸಿದವರನ್ನು ಮಾತ್ರ ಅಂತಿಮ ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತದೆ ಎಂದು ಕೆಇಎ ತಿಳಿಸಿದೆ.
ಜ.13ರ ಬೆಳಿಗ್ಗೆ 11 ಗಂಟೆ ಬಳಿಕ ಅಂತಿಮ ಅಥವಾ ನೈಜ ಸೀಟು ಹಂಚಿಕೆ ಪಟ್ಟಿ ಪ್ರಕಟಿಸಲಾಗುವುದು. ಸೀಟು ದೊರೆತ ಅಭ್ಯರ್ಥಿಗಳು ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಜ.15ರ ಸಂಜೆ 4.30ರವರೆಗೆ ಅವಕಾಶವಿರುತ್ತದೆ ಎಂದು ತಿಳಿಸಲಾಗಿದೆ. ಇದಾದ ಬಳಿಕ ಯಾವುದೇ ಕಾರಣಕ್ಕೂ ದಿನಾಂಕವನ್ನು ವಿಸ್ತರಿಸುವುದಿಲ್ಲ ಎಂದೂ ಪ್ರಾಧಿಕಾರ ಹೇಳಿದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.