ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

Last Updated 25 ನವೆಂಬರ್ 2020, 21:48 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- 2020 (ನೀಟ್)ರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆಯ ಮೊದಲನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಬುಧವಾರ ಪ್ರಕಟಿಸಿದೆ.

2020ನೇ ಸಾಲಿನಲ್ಲಿ ಸರ್ಕಾರ ನಿಗದಿಪಡಿಸಿರುವ ಸೀಟ್ ಮ್ಯಾಟ್ರಿಕ್ಸ್ ಅನ್ನು ಅಳವಡಿಸಿಕೊಂಡು ಅಭ್ಯರ್ಥಿಗಳ ಮೆರಿಟ್ ಮತ್ತು ಅಭ್ಯರ್ಥಿಗಳು ದಾಖಲಿಸಿರುವ ಆಯ್ಕೆ ಆಧರಿಸಿ ಸೀಟು ಹಂಚಿಕೆ ಮಾಡಲಾಗಿದೆ.‌

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳಿಗೆ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ಆಯ್ಕೆ ಮಾಡಿಕೊಳ್ಳಲು ಗುರುವಾರದಿಂದ ವೆಬ್ ಪೋರ್ಟಲ್ ತೆರೆಯಲಾಗುತ್ತದೆ. ಅಭ್ಯರ್ಥಿಗಳು ಮುಂದಿನ ಸುತ್ತುಗಳಲ್ಲಿ ಭಾಗವಹಿಸಲು ನಿಗದಿಪಡಿಸಿರುವ ಅರ್ಹತೆ ಮತ್ತು ಮುಂದಿನ ಸುತ್ತುಗಳಲ್ಲಿ ಬರಬಹುದಾದ ಸೀಟುಗಳನ್ನು ಗಮನದಲ್ಲಿಟ್ಟುಕೊಂಡು ಪೋಷಕರ ಜೊತೆ ಚರ್ಚಿಸಿ ಸೂಕ್ತವಾದ ಆಯ್ಕೆ ಮಾಡಿಕೊಳ್ಳಲು ಸೂಚಿಸಿದೆ.‌

ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಪೈಕಿ ಸರ್ಕಾರಿ ಸೀಟು ಅಥವಾ ಖಾಸಗಿ ಸೀಟು ಪಡೆದು ಆಯ್ಕೆ-1 ಅನ್ನು ಆಯ್ಕೆ ಮಾಡುವವರು ಮೂಲ ದಾಖಲಾತಿಗಳನ್ನು ಬೆಂಗಳೂರಿನ ಕೆಇಎ ಕಚೇರಿಗೆ ಸಲ್ಲಿಸುವಂತೆ ಪ್ರಾಧಿಕಾರ ಸೂಚಿಸಿದೆ. ಸೀಟು ಹಂಚಿಕೆ ಫಲಿತಾಂಶ ಮತ್ತು ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ಗೆ ಭೇಟಿ ನೀಡುವಂತೆ ಕೆಇಎ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT