ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ವಿವಿ ಕೋರ್ಸ್‌ಗಳ ಪ್ರವೇಶಕ್ಕೆ ಒಂದೇ ಸಿಇಟಿ ?

Last Updated 8 ಜನವರಿ 2021, 19:07 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿನ ಖಾಸಗಿ ವಿಶ್ವವಿದ್ಯಾಲಯಗಳ ಕೋರ್ಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.

ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಖಾಸಗಿ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳ ಜೊತೆ ಶುಕ್ರವಾರ ನಡೆದ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹಲವು ಸಿಇಟಿ ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳ ಮೇಲೆ ಹೆಚ್ಚು ಒತ್ತಡ ಬೀಳುತ್ತಿದೆ. ಎಲ್ಲ ಖಾಸಗಿ ವಿಶ್ವವಿದ್ಯಾಲಯಗಳಿಗೂ ಸೇರಿ ಒಂದೇ ಪರೀಕ್ಷೆ ನಡೆಸಿದರೆ ವಿದ್ಯಾರ್ಥಿಗಳಿಗೂ ಅನುಕೂಲವಾಗುತ್ತದೆ ಹಾಗೂ ಸಮಯ ಮತ್ತು ಹಣದ ಉಳಿತಾಯವಾಗುತ್ತದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. ಈ ಕುರಿತು ಇನ್ನೊಮ್ಮೆ ಸಭೆ ನಡೆಸಿದ ನಂತರ ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಸದ್ಯ, ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳಿಗೆ ಕಾಮೆಡ್‌–ಕೆಯು ಸಿಇಟಿ ನಡೆಸುತ್ತಿದೆ. ಇದರೊಂದಿಗೆ, ಕರ್ನಾಟಕ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತ ವೃತ್ತಿಪರ ಕಾಲೇಜುಗಳ ಸಂಸ್ಥೆ (ಕೆಆರ್‌ಎಲ್‌ಎಂಪಿಸಿಎ) ಹಾಗೂ ಅಲ್ಪಸಂಖ್ಯಾತ ವೃತ್ತಿಪರ ಕಾಲೇಜುಗಳ ಸಂಸ್ಥೆ (ಎಎಂಪಿಸಿಕೆ) ಯು ಪ್ರತ್ಯೇಕ ಸಿಇಟಿ ನಡೆಸುತ್ತಿದೆ. ಅಲ್ಲದೆ, ಖಾಸಗಿ ಕೋಟಾದ ಸೀಟುಗಳಿಗಾಗಿ ಖಾಸಗಿ ವಿಶ್ವವಿದ್ಯಾಲಯಗಳೂ ಪ್ರವೇಶ ಪರೀಕ್ಷೆ ನಡೆಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT