ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಒಎಂಆರ್‌’ ಪ್ರತಿ ಸಲ್ಲಿಕೆ ಕಾಲಾವಕಾಶ ಕೋರಿದ ಕೆಇಎ

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕರಣ
Last Updated 2 ಜೂನ್ 2022, 20:18 IST
ಅಕ್ಷರ ಗಾತ್ರ

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯ ಪ್ರಶ್ನೆಗಳ ಸೋರಿಕೆ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದು, ಸಂಶಯಾಸ್ಪದ ಅಭ್ಯರ್ಥಿಗಳ ಒಎಂಆರ್ ಪ್ರತಿಗಳನ್ನು ನೀಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕಾರಿಗಳು ಕಾಲಾವಕಾಶ ಕೋರಿದ್ದಾರೆ.

ಮಲ್ಲೇಶ್ವರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಸಿಸಿಬಿ ಪೊಲೀಸರು, ಆರೋಪಿಗಳಾದ ಅತಿಥಿ ಉಪನ್ಯಾಸಕಿ ಆರ್. ಸೌಮ್ಯಾ ಹಾಗೂ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದ (ಮೌಲ್ಯಮಾಪನ) ಪ್ರೊ. ಎಚ್‌. ನಾಗರಾಜ್ ಅವರ ವಿಚಾರಣೆ ನಡೆಸಿ ಮಾಹಿತಿ ಕಲೆಹಾಕಿದ್ದಾರೆ.

‘ಮಾರ್ಚ್‌ 14ರಂದು ನಡೆದಿದ್ದ ಭೂಗೋಳಶಾಸ್ತ್ರ ವಿಷಯದ ಪ್ರಶ್ನೆಪತ್ರಿಕೆಯ 18 ಪ್ರಶ್ನೆಗಳು, ಪರೀಕ್ಷೆಗೂ ಮುನ್ನ ಸೋರಿಕೆಯಾದ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ ಅವರೇ ದೂರು ನೀಡಿದ್ದರು. ಪ್ರಶ್ನೆಗಳ ಸೋರಿಕೆ ಮಾತ್ರವಲ್ಲದೇ, ಒಎಂಆರ್ ಪ್ರತಿ ತಿದ್ದುಪಡಿ ಬಗ್ಗೆಯೂ ಇದೀಗ ಅನುಮಾನ ಬಂದಿದೆ’ ಎಂದು ಸಿಸಿಬಿ ಪೊಲೀಸ್ ಮೂಲಗಳು ಹೇಳಿವೆ.

‘ಕೆಲ ಅಭ್ಯರ್ಥಿಗಳ ಒಎಂಆರ್ ಪ್ರತಿ
ಗಳನ್ನು ನೀಡುವಂತೆ ಕೆಇಎ ಅಧಿಕಾರಿ
ಗಳಿಗೆ ಪತ್ರ ಬರೆಯಲಾಗಿತ್ತು. ಅದಕ್ಕೆ ಉತ್ತ
ರಿಸಿರುವ ಅಧಿಕಾರಿಗಳು, ‘ಒಎಂಆರ್ ಪ್ರತಿಗಳು ಭದ್ರತೆಯಲ್ಲಿದ್ದು, ಅವುಗಳನ್ನು ಹೊರಗೆ ತೆಗೆಯಲು ಯಾರಿಂದಲೂ ಸಾಧ್ಯವಿಲ್ಲ. ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿದ್ದು, ಇದು ಮುಗಿದ ಬಳಿಕವೇ ಒಎಂಆರ್ ಪ್ರತಿಗಳನ್ನು ನೀಡಲಾಗುವುದು. ಅಲ್ಲಿಯವರೆಗೂ ಕಾಲಾವಕಾಶ ನೀಡಿ ಎಂದಿದ್ದಾರೆ. ಹೀಗಾಗಿ, ಕಾಲಾವಕಾಶ ನೀಡಲಾಗಿದೆ’ ಎಂದೂ ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT