ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಟಿಐ ಪರೀಕ್ಷೆ ಹೊಣೆ ಕೆಇಎಗೆ

Last Updated 22 ಡಿಸೆಂಬರ್ 2020, 4:49 IST
ಅಕ್ಷರ ಗಾತ್ರ

ಬೆಂಗಳೂರು: ಕೈಗಾರಿಕಾ ತರಬೇತಿ ಸಂಸ್ಥೆಗಳ (ಐಟಿಐ) ಕೋರ್ಸ್‌ಗಳಿಗೂ ಇನ್ನು ಮುಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ (ಕೆಇಎ) ಪರೀಕ್ಷೆ ನಡೆಸಲಿದೆ. ಐಟಿಐಗಳ ಸುಧಾರಣೆಗೆ ಮುಂದಾಗಿರುವ ರಾಜ್ಯ ಸರ್ಕಾರ, ಈ ಕೋರ್ಸ್‌ಗಳಿಗೆ ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು ಕೆಇಎಗೆ ನೀಡಿದೆ.

ಈ ಸಂಬಂಧ ಒಪ್ಪಂದಕ್ಕೆ ಕೌಶಲ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಸೆಲ್ವಕುಮಾರ್‌ ಮತ್ತು ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್‌ ನಾಯ್ಕ್‌ ಸೋಮವಾರ ಸಹಿ ಹಾಕಿದದರು.

ಐಟಿಐ ಸೇರಿದಂತೆ ಉಳಿದ ಎಲ್ಲ ವೃತ್ತಿಪರ ಕೋರ್ಸ್‌ಗಳಿಗೆ ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ ಸಂಸ್ಥೆ ಈ ಮೊದಲು ಪರೀಕ್ಷೆ ನಡೆಸುತ್ತಿತ್ತು. ಆದರೆ, ಈ ಪರೀಕ್ಷೆಯ ಸ್ವರೂಪದ ಬಗ್ಗೆ ಹಲವು ದೂರುಗಳಿದ್ದವು. ಪಾರದರ್ಶಕವಾಗಿ ಪರೀಕ್ಷೆ ನಡೆಯುತ್ತಿಲ್ಲ ಎಂದು ವಿದ್ಯಾರ್ಥಿಗಳೂ ದೂರಿದ್ದರು. ಈ ದೂರುಗಳಿಗೆ ಸ್ಪಂದಿಸಿದ್ದ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ತಜ್ಞರ ಅಭಿಪ್ರಾಯ ಕೇಳಿದ್ದರು.

ತಜ್ಞರ ಶಿಫಾರಸ್ಸಿನಂತೆ, ಐಟಿಐ ಕೋರ್ಸ್‌ಗಳಿಗೆ ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು ಕೆಇಎಗೆ ನೀಡಲಾಗಿದೆ. ಪ್ರಶ್ನೆಪತ್ರಿಕೆ ಸಿದ್ಧಪಡಿಸುವುದು, ಪ್ರವೇಶ ಪತ್ರದ ವಿತರಣೆ, ಮೌಲ್ಯಮಾಪನ, ಫಲಿತಾಂಶ ಪ್ರಕಟಣೆಯಂತಹ ಎಲ್ಲ ಕಾರ್ಯವನ್ನು ಕೆಇಎ ಮಾಡಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT