ಶನಿವಾರ, ಜನವರಿ 28, 2023
15 °C

ಕೆಂಪೇಗೌಡರ ಹೆಸರು ರಾಜಕೀಯಕ್ಕೆ ಬಳಕೆ: ಕುಮಾರಸ್ವಾಮಿ ಕಿಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಬಿಜೆಪಿ ನಾಯಕರು ಕೆಂಪೇಗೌಡರ ಹೆಸರನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಬಸವನಗುಡಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜೆಡಿಎಸ್ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಕೆಂಪೇಗೌಡರ ಪ್ರತಿಮೆ ಸ್ಥಾಪನೆ ಮಾಡಿದರೆ ಒಕ್ಕಲಿಗರ ಮತ ಸೆಳೆಯಬಹುದು ಎಂದು ಬಿಜೆಪಿ ಲೆಕ್ಕಾಚಾರ ಮಾಡಿದೆ. ಬಿಜೆಪಿ ನಾಯಕರು ಭ್ರಮೆಯಲ್ಲಿದ್ದಾರೆ. ಚುನಾವಣೆ ಬಂದಾಗ ಜನರೇ ಅವರ ಭ್ರಮೆ ಕಳಚಲಿದ್ದಾರೆ. ಪ್ರತಿಮೆ ಸ್ಥಾಪನೆ ಅನಾವರಣ ಬಿಜೆಪಿ ಸರ್ಕಾರದ ನಿಯೋಜಿತ ಕಾರ್ಯಕ್ರಮ. ಪ್ರಧಾನಿ ನರೇಂದ್ರ ಮೋದಿ ಬರುತ್ತಾರೆ, ಹೋಗುತ್ತಾರೆ ಅಷ್ಟೇ. ಅದಕ್ಕೆ ಹೆಚ್ಚು ಮಹತ್ವ ಕೊಡವ ಅಗತ್ಯವಿಲ್ಲ ಎಂದು ಕುಟುಕಿದರು.

ಬೆಂಗಳೂರು ದೊಡ್ಡಮಟ್ಟದಲ್ಲಿ ಬೆಳೆದಿದೆ. ನಿರುದ್ಯೋಗ ಸಮಸ್ಯೆಯೂ ಅಧಿಕವಾಗಿದೆ. ಎರಡು ರಾಷ್ಟ್ರೀಯ ಪಕ್ಷಗಳ ಆಡಳಿತಾವಧಿಯಲ್ಲಿ ಬೆಂಗಳೂರಲ್ಲಿ ಹಲವಾರು ರೀತಿಯ ಅನಾಹುತ ಕಂಡಿದೆ. ಅದನ್ನು ಸರಿಪಡಿಸುವ ಮೂಲಕ ಕೆಂಪೇಗೌಡರಿಗೆ ಗೌರವ ಕೊಡುವುದು ಎಲ್ಲರ ಕರ್ತವ್ಯ ಎಂದರು.

ಧರ್ಮ, ಜಾತಿ ಹೆಸರಿನಲ್ಲಿ ಕಾಂಗ್ರೆಸ್‌, ಬಿಜೆಪಿ ಜನರ ಮನಸ್ಸು ಕೆಡಿಸುತ್ತಿವೆ. ಎರಡೂ ಪಕ್ಷಗಳಿಗೆ ಅಭಿವೃದ್ಧಿ ಬೇಕಿಲ್ಲ. ಸೂಕ್ಷ್ಮ ವಿಚಾರ ಇಟ್ಟುಕೊಂಡು ಚುನಾವಣಾ ರಾಜಕೀಯ ಮಾಡುತ್ತಿವೆ ಎಂದು ದೂರಿದರು.

ಕಚೇರಿ ಉದ್ಘಾಟನೆಗೂ ಮೊದಲು ನೆಟ್ಕಲ್ಲಪ್ಪ ವೃತ್ತದ ಗಣಪತಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದದರು. ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಸಾಗಿದರು. ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಬಸವನಗುಡಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅರಮನೆ ಶಂಕರ್, ಪಕ್ಷದ ಹಿರಿಯ ಮುಖಂಡ ಬಾಗೇಗೌಡ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು