ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಕೇರಳದಿಂದ ರಾಜ್ಯಕ್ಕೆ ಬರುವವರ ಪ್ರಯಾಣ ಮುಂದೂಡುವಂತೆ ಸರ್ಕಾರ ಸೂಚನೆ

Last Updated 7 ಸೆಪ್ಟೆಂಬರ್ 2021, 13:07 IST
ಅಕ್ಷರ ಗಾತ್ರ

ಬೆಂಗಳೂರು: ಕೇರಳದಿಂದ ರಾಜ್ಯಕ್ಕೆ ಬರುವವರ ಪ್ರಯಾಣವನ್ನು ಅಕ್ಟೋಬರ್ ಅಂತ್ಯದವರೆಗೆ ಮುಂದೂಡುವಂತೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ‘ನೆರೆಯ ಕೇರಳದ ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ, ಹೋಟೆಲ್, ಆಸ್ಪತ್ರೆ, ನರ್ಸಿಂಗ್ ಹೋಮ್, ಕಾರ್ಖಾನೆ ಮುಂತಾದ ಸಂಸ್ಥೆಗಳ ಆಡಳಿತ ವರ್ಗ ಮತ್ತು ಮಾಲೀಕರಿಗೆ ಕೇರಳದಿಂದ ಆಗಮಿಸುವ ತಮ್ಮ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳಿಗೆ ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡಲು ತಿಳಿಸುವಂತೆ ಸೂಚಿಸಲಾಗಿದೆ’ ಎಂದು ಹೇಳಿದ್ದಾರೆ.

ಕೇರಳದಲ್ಲಿ ಕೋವಿಡ್‌ ಹೊಸ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, 2,39,338 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಸೋಮವಾರದಂದು 973 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರೊಂದಿಗೆ ಕೋವಿಡ್-19 ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 29,56,137ಕ್ಕೆ ತಲುಪಿದೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 17,386ಕ್ಕೆ ತಲುಪಿದೆ. ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 17,386ಕ್ಕೆ ತಲುಪಿದೆ.


ದೇಶದಲ್ಲಿ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 3,30,58,843ಕ್ಕೆ ಏರಿಕೆಯಾಗಿದ್ದು, ಈ ಪೈಕಿ 3,22,24,937 ಮಂದಿ ಚೇತರಿಸಿಕೊಂಡಿದ್ದಾರೆ ಹಾಗೂ 4,41,042 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT