ಶುಕ್ರವಾರ, ಏಪ್ರಿಲ್ 23, 2021
28 °C

ಕೇರಳದಲ್ಲಿ ಬಿಜೆಪಿಯತ್ತ ಒಲವು: ಅಶ್ವತ್ಥನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೇರಳದಲ್ಲಿ ಜನರು ಎಡಪಕ್ಷಗಳ ನೇತೃತ್ವದ ಎಲ್‌ಡಿಎಫ್‌ ಮತ್ತು ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಮೈತ್ರಿಕೂಟಗಳ ದುರಾಡಳಿತದಿಂದ ಬೇಸತ್ತುಹೋಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯತ್ತ ಒಲವು ಹೊಂದಿದ್ದಾರೆ ಎಂದು ಬಿಜೆಪಿಯ ಕೇರಳ ಸಹ ಪ್ರಭಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದರು.

ನಗರದಲ್ಲಿ ನೆಲೆಸಿರುವ ಕೇರಳದ ಜನರೊಂದಿಗೆ ಭಾನುವಾರ ಸಂವಾದ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಎರಡೂ ಮೈತ್ರಿಕೂಟಗಳು 70 ವರ್ಷಗಳಿಂದ ಕೇರಳದ ಜನರನ್ನು ಕತ್ತಲೆಯಲ್ಲಿಟ್ಟು, ರಾಜಕೀಯ ಮಾಡುತ್ತಿವೆ. ಎರಡೂ ಮೈತ್ರಿಕೂಟಗಳ ಆಡಳಿತ ಸಂಪೂರ್ಣ ವಿಫಲವಾಗಿದೆ. ಈ ಚುನಾವಣೆಯಲ್ಲಿ ಜನರು ಬದಲಾವಣೆ ಬಯಸುತ್ತಿದ್ದಾರೆ’ ಎಂದರು.

ಎಲ್‌ಡಿಎಫ್‌ ಮೈತ್ರಿಕೂಟದ ಸರ್ಕಾರ ರಾಜಕೀಯ ಕಿರುಕುಳ, ರಾಜಕೀಯ ವೈಷಮ್ಯದ ಕೊಲೆ ಹಾಗೂ ಸೇಡಿನ ರಾಜಕೀಯದಲ್ಲೇ ಮುಳುಗಿದೆ. ಎರಡೂ ಮೈತ್ರಿಕೂಟಗಳು ಜಾತಿ, ಜಾತಿಗಳ ನಡುವೆ ವೈಷಮ್ಯ ಸೃಷ್ಟಿಸಿ ರಾಜಕೀಯ ಲಾಭ ಪಡೆಯುತ್ತಿವೆ ಎಂದು ದೂರಿದರು.

‘ಎಲ್‌ಡಿಎಫ್‌ ಮೈತ್ರಿಕೂಟದ ಆಡಳಿತದಿಂದ ಕೇರಳಕ್ಕೆ ದೊಡ್ಡ ಪ್ರಮಾಣದ ಹಾನಿಯಾಗಿದೆ. ಎಡ ಪಕ್ಷಗಳು ದೇಶಕ್ಕೆ ಅಪ್ರಸ್ತುತವಾಗಿವೆ. ಹಲವು ಪಕ್ಷಗಳಿಗೆ ಕೇರಳದಲ್ಲಿ ನಾಯಕತ್ವವೇ ಇಲ್ಲ. ಬಿಜೆಪಿಯ ಸಂಘಟನೆ ಬಲವಾಗಿದೆ. ಈ ಬಾರಿ ಬಿಜೆಪಿ ಕೇರಳದಲ್ಲಿ ಅಧಿಕಾರಕ್ಕೆ ಬರುವುದು ನಿಶ್ಚಿತ’ ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು