ಕಿಕ್ ಬ್ಯಾಕ್ ಕಾಂಗ್ರೆಸ್ ಸಂಸ್ಕೃತಿ: ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ

ಬೆಂಗಳೂರು: ‘ಜಿಟಿಟಿಸಿ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ ಎಂದು ಸುಳ್ಳು ಆರೋಪ ಮಾಡಿರುವ ವಿ.ಎಸ್. ಉಗ್ರಪ್ಪ ಮತ್ತು ಎಚ್.ಎಂ. ರೇವಣ್ಣ ಅವರಿಗೆ ಲೀಗಲ್ ನೋಟಿಸ್ ನೀಡಲಾಗುವುದು’ ಎಂದು ಎಚ್ಚರಿಕೆ ನೀಡಿದ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ‘ಕಿಕ್ ಬ್ಯಾಕ್, ಫುಲ್ ಬ್ಯಾಕ್ ಎನ್ನುವುದು ಕಾಂಗ್ರೆಸ್ ನಾಯಕರ ಸಂಸ್ಕೃತಿ’ ಎಂದರು.
‘ಜಿಟಿಟಿಸಿ ಟೆಂಡರ್ ಬಗ್ಗೆ ಸುಳ್ಳಿನ ಸೌಧ ಕಟ್ಟಿದ್ದಾರೆ. ಗಾಳಿಯಲ್ಲಿ ಗುಂಡು ಹೊಡೆಯುವ ಕೀಳುಮಟ್ಟದ ಆರೋಪ. ಅಲ್ಲದೆ, ನಮಗೆ ಮಸಿ ಬಳಿಯುವ ದುರುದ್ದೇಶವಷ್ಟೇ. ಆರೋಪ ಮಾಡಿದವರಿಗೆ ಬುದ್ಧಿಭ್ರಮಣೆ ಆಗಿರಬೇಕು’ ಎಂದರು.
‘ವೈಮಾನಿಕ ಅಭಿವೃದ್ಧಿ ಸಂಸ್ಥೆ(ಎಡಿಎ), ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಘಟನೆ (ಡಿಆರ್‌ಡಿಒ) ಹಾಗೂ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ದಿಮೆಗಳು (ಎಂಎಸ್ಎಂಇ) ಸಚಿವಾಲಯದ ಸಂಸ್ಥೆಗಳ ವಿಜ್ಞಾನಿಗಳು ಮತ್ತು ಅಧಿಕಾರಿಗಳು ಟೆಂಡರ್ ತಾಂತ್ರಿಕ ಸಮಿತಿಯ ಸದಸ್ಯರು. ಅವರ ಸಲಹೆ ಮೇಲೆಯೇ ಎಲ್ಲವೂ ನಡೆಯುತ್ತಿದೆ. ಬಹುತೇಕ ಉಪಕರಣಗಳನ್ನು ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್‌ಎಂಟಿ ಸಂಸ್ಥೆಯಿಂದ ಖರೀದಿ ಮಾಡಲಾಗುತ್ತಿದೆ. ಅದೂ ಟೆಂಡರ್ ಮೂಲಕ ಪಾರದರ್ಶಕವಾಗಿ ನಡೆಯುತ್ತದೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.