ಕಿಶೋರ್ ಕುಮಾರ್ ಕೊಡ್ಗಿ ಕ್ಯಾಂಪ್ಕೊ ಅಧ್ಯಕ್ಷ

ಮಂಗಳೂರು: ಕ್ಯಾಂಪ್ಕೊ ಅಧ್ಯಕ್ಷರಾಗಿ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕು ಅಮಾಸೆಬೈಲಿನ ಕಿಶೋರ್ ಕುಮಾರ್ ಕೊಡ್ಗಿ ಭಾನುವಾರ ಆಯ್ಕೆಯಾಗಿದ್ದಾರೆ.
ನಗರದಲ್ಲಿರುವ ಕ್ಯಾಂಪ್ಕೊ ಕೇಂದ್ರ ಕಚೇರಿಯಲ್ಲಿ ಭಾನುವಾರ ನಡೆದ ನೂತನ ಆಡಳಿತ ಮಂಡಳಿಯ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು, ಉಪಾಧ್ಯಕ್ಷರಾಗಿ ಶಂಕರನಾರಾಯಣ ಭಟ್ ಖಂಡಿಗೆ ಆಯ್ಕೆಯಾದರು. ನೂತನ ನಿರ್ದೇಶಕ ಮಂಡಳಿಯು ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ನಡೆಸಲಿದೆ.
ಇದಕ್ಕೂ ಮೊದಲು ಭಾನುವಾರ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಸದಸ್ಯರಿಗೆ ಶೇ 10 ಲಾಭಾಂಶ ಘೋಷಿಸಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.