ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿತ್ತೂರು ಕರ್ನಾಟಕ: ಬೊಮ್ಮಾಯಿ‌ ಘೋಷಣೆ

ಚನ್ನಮ್ಮನ ಕಿತ್ತೂರು ಉತ್ಸವಕ್ಕೆ ವರ್ಣರಂಜಿತ ಚಾಲನೆ
Last Updated 24 ಅಕ್ಟೋಬರ್ 2021, 1:40 IST
ಅಕ್ಷರ ಗಾತ್ರ

ಬೆಳಗಾವಿ: ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಬೇಕು ಎಂಬ ಬೇಡಿಕೆ ಬಹಳ ವರ್ಷಗಳಿಂದಲೂ ಇದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ‌ ಇಲಾಖೆ ಸಹಯೋಗದಲ್ಲಿ ಜಿಲ್ಲೆಯ ಕಿತ್ತೂರಿನ ಕೋಟೆ ಆವರಣದಲ್ಲಿ ಆಯೋಜಿಸಿರುವ ಎರಡು ದಿನಗಳ 'ಚನ್ನಮ್ಮನ ಕಿತ್ತೂರು' ಉತ್ಸವಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

ಮುಂದಿನ‌ ವರ್ಷದಿಂದ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಆಚರಿಸಲು ಆದೇಶ ನೀಡಲಾಗುವುದು ಎಂದು ಅವರು ಪ್ರಕಟಿಸಿದರು.

ಅವನತಿಗೊಂಡಿರುವ ಕಿತ್ತೂರು ಅರಮನೆಯ ಪ್ರತಿರೂಪವನ್ನು ಮರು ಸೃಷ್ಟಿಸಲಾಗುವುದು. ಚನ್ನಮ್ಮ ಬಳಸಿದ್ದ ಖಡ್ಗ ಸೇರಿದಂತೆ ಎಲ್ಲ ವಸ್ತುಗಳನ್ನೂ ಎಲ್ಲೆಲ್ಲಿವೆಯೋ ಅಲ್ಲಿಂದ ತರಿಸಲು ಕ್ರಮ‌ ವಹಿಸಲಾಗುವುದು ಎಂದು ಹೇಳಿದರು.

ಶಾಸಕ ಮಹಾಂತೇಶ ದೊಡ್ಡಗೌಡರ, ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಹರಿಹರದ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT