ಗುರುವಾರ , ಜುಲೈ 29, 2021
21 °C
ಮುಖಂಡರೊಂದಿಗೆ ರಾಜ್ಯ ರಾಜಕೀಯ ಚರ್ಚೆ

ವರಿಷ್ಠರ ಭೇಟಿ ಮಾಡಿದ ಮುನಿಯಪ್ಪ, ಜಾರ್ಜ್: ರಾಜ್ಯ ರಾಜಕೀಯದ ಬಗ್ಗೆ ಚರ್ಚೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಮಾಜಿ ಸಚಿವರಾದ ಕೆ.ಎಚ್‌. ಮುನಿಯಪ್ಪ ಹಾಗೂ ಕೆ.ಜೆ. ಜಾರ್ಜ್‌ ಅವರು ಮಂಗಳವಾರ ಕಾಂಗ್ರೆಸ್‌ ವರಿಷ್ಠರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್‌ ಹಾಗೂ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರನ್ನು ಭೇಟಿ ಮಾಡಿದ ಕೇಂದ್ರದ ಮಾಜಿ ಸಚಿವ ಮುನಿಯಪ್ಪ, ರಾಜ್ಯದಲ್ಲಿನ ಪಕ್ಷದ ರಾಜಕೀಯ ಸ್ಥಿತಿಗತಿ ಕುರಿತು ವಿವರಿಸಿದರು.

ಮುಂದಿನ ಮುಖ್ಯಮಂತ್ರಿ ಚರ್ಚೆ ನಡೆಸದಂತೆ ಪಕ್ಷ ಎಚ್ಚರಿಕೆ ನೀಡಿದ್ದರೂ ಕೆಲವರು ಹೇಳಿಕೆ ನೀಡುವುದನ್ನು ಮುಂದುವರಿಸಿದ್ದಾರೆ. ಈ ಸಂಬಂಧ ಉಂಟಾಗುತ್ತಿರುವ ಗೊಂದಲವನ್ನು ನಿವಾರಿಸುವ ನಿಟ್ಟಿನಲ್ಲಿ ಕೂಡಲೇ ರಾಜ್ಯಕ್ಕೆ ಭೇಟಿ ನೀಡಬೇಕು ಎಂದು ಅವರು ಸುರ್ಜೇವಾಲಾ ಅವರನ್ನು ಕೋರಿದರು.

ಮೊದಲು ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಗೆಲುವು ಸಾಧಿಸುವ ಅಗತ್ಯವಿದೆ. ನಂತರವಷ್ಟೇ ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ಚಿಂತನೆ ನಡೆಸಬೇಕಿದೆ. ಹೈಕಮಾಂಡ್‌ ಕೈಗೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂಬ ಸಂದೇಶ ರವಾನಿಸುವಂತೆ ಮನವಿ ಸಲ್ಲಿಸಿದ್ದಾಗಿ ಮುನಿಯಪ್ಪ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ ಕೆ.ಜೆ. ಜಾರ್ಜ್‌ ಅವರು, ರಾಜಕೀಯ ಸ್ಥಿತಿಗತಿ ಕುರಿತು ಚರ್ಚಿಸಿದರು ಎಂದು ತಿಳಿದುಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು