ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಲು ಸಂಗ್ರಹ 89 ಲಕ್ಷ ಲೀಟರ್‌ಗೆ ಏರಿಕೆ

Last Updated 3 ಜೂನ್ 2021, 17:14 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್‌ಡೌನ್ ನಡುವೆ ಹಾಲು ಉತ್ಪಾದನೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕೆಎಂಎಫ್‌ (ಕರ್ನಾಟಕ ಹಾಲು ಮಹಾಮಂಡಳ) ದಿನಕ್ಕೆ ಸಂಗ್ರಹಿಸುತ್ತಿರುವ ಒಟ್ಟು ಹಾಲಿನ ಪ್ರಮಾಣ 89 ಲಕ್ಷ ಲೀಟರ್‌ಗೆ ಏರಿಕೆಯಾಗಿದೆ.

ಮೇ ಮೊದಲ ವಾರದಲ್ಲಿ 70 ಲಕ್ಷ ಲೀಟರ್ ಹಾಲನ್ನು ಒಕ್ಕೂಟಗಳಿಗೆ ರೈತರು ಪೂರೈಸುತ್ತಿದ್ದರು. ಒಂದೇ ವಾರದಲ್ಲಿ ಅದರ ಪ್ರಮಾಣ 82 ಲಕ್ಷ ಲೀಟರ್‌ಗೆ ಏರಿಕೆಯಾಗಿತ್ತು. ಈಗ 89 ಲಕ್ಷ ಲೀಟರ್‌ಗೆ ಮುಟ್ಟಿದೆ. ಜೂನ್ ಮತ್ತು ಜುಲೈನಲ್ಲಿ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಕೆಎಂಎಫ್ ಅಂದಾಜಿಸಿದೆ.

ಖಾಸಗಿಯವರು ಹಾಲು ಖರೀದಿ ಕಡಿಮೆ ಮಾಡಿರುವುದು, ಮಳೆ ಆಗಿದ್ದರಿಂದ ದನಕರುಗಳಿಗೆ ಯಥೇಚ್ಛವಾಗಿ ಮೇವು ಸಿಕ್ಕುತ್ತಿರುವುದು ಹಾಲಿನ ಪ್ರಮಾಣ ಹೆಚ್ಚಳಕ್ಕೆ ಕಾರಣ.

‘ಲಾಕ್‌ಡೌನ್ ಎರಡನೇ ಅಲೆಯ ನಡುವೆಯೂ 62 ಸಾವಿರ ಟನ್ ಪಶು ಆಹಾರ ಉತ್ಪಾದಿಸಲಾಗಿದೆ. ಜನವರಿ ಮತ್ತು ಫೆಬ್ರುವರಿಯಲ್ಲಿ ಪ್ರತಿ ಟನ್‌ ಪಶು ಆಹಾರಕ್ಕೆ ₹2 ಸಾವಿರ ಕಡಿಮೆ ಮಾಡುವ ಮೂಲಕ ರೈತರ ಕೈ ಹಿಡಿಯಲಾಯಿತು. ಅಲ್ಲದೇ, 1 ಲಕ್ಷ ಟನ್‌ ಮೆಕ್ಕೆಜೋಳವನ್ನು ರೈತರಿಂದ ಖರೀದಿಸಲಾಗಿದೆ’ ಎಂದು ಕೆಎಂಎಫ್ ವಿವರಿಸಿದೆ.

ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗ್ರಾಹಕರ ಮನೆ– ಮನೆಗೆ ತಲುಪಿಸುವ ವ್ಯವಸ್ಥೆ ಹೆಚ್ಚಿಸಲಾಗಿದೆ. ಇ-ಮಾರುಕಟ್ಟೆ ಬಲಪಡಿಸಲಾಗಿದೆ. 500ಕ್ಕೂ ಹೆಚ್ಚು ಮನೆಗಳಿರುವ ಅಪಾರ್ಟ್‍ಮೆಂಟ್‍ ಸಮುಚ್ಚಯಗಳನ್ನು ಗುರುತಿಸಿ ಮಳಿಗೆಗಳನ್ನು ತೆರೆಯಲಾಗಿದೆ. ಲಾಕ್‌ಡೌನ್ ಅವಧಿಯಲ್ಲಿ ಹೋಟೆಲ್‌, ರೆಸ್ಟೋರೆಂಟ್‌, ಕ್ಯಾಂಟೀನ್‌ಗಳು ಸ್ಥಗಿತಗೊಂಡು ಹಾಲಿನ ಮಾರಾಟ ಕಡಿಮೆಯಾಗಿದ್ದರೂ, ಗುಡ್‌ಲೈಫ್ ಹಾಲು ಮತ್ತು ಇತರ ಉತ್ಪನ್ನಗಳ ಮಾರಾಟ ಹೆಚ್ಚಿಸಿ ಸರಿದೂಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಜೂನ್‌ 1ರಿಂದ ಪ್ರತಿ ಲೀಟರ್‌ ಹಾಲಿಗೆ 40 ಗ್ರಾಂ ಹೆಚ್ಚುವರಿಯಾಗಿ ಉಚಿತವಾಗಿ ನೀಡಲಾಗುತ್ತಿದೆ’ ಎಂದು ಕೆಎಂಎಫ್ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT