ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಲಿನ ಬೆಲೆ ₹3 ಹೆಚ್ಚಳ: ಸಿಎಂ ಜೊತೆ ಚರ್ಚಿಸಿ ತೀರ್ಮಾನ ಎಂದ ಸೋಮಶೇಖರ್

Last Updated 13 ಸೆಪ್ಟೆಂಬರ್ 2022, 19:14 IST
ಅಕ್ಷರ ಗಾತ್ರ

ಬೆಂಗಳೂರು: ‘ಹಾಲಿನ ಬೆಲೆ ಲೀಟರ್‌ಗೆ ₹ 3 ಹೆಚ್ಚಿಸುವ ಕುರಿತಂತೆ ಮುಖ್ಯಮಂತ್ರಿ ಜೊತೆ ಚರ್ಚಿಸಿದ ಬಳಿಕ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ಸಿನ ಎಸ್‌. ರವಿ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, ‘ಎಲ್ಲ 14 ಹಾಲು ಒಕ್ಕೂಟಗಳ ಸಭೆಯಲ್ಲಿ ಹಾಲಿನ ಬೆಲೆ ಹೆಚ್ಚಿಸುವಂತೆ ಬೇಡಿಕೆ ಬಂದಿದೆ. ಒಕ್ಕೂಟಗಳ ಮನವಿಯನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗಿದೆ’ ಎಂದರು.

‘ಕೋವಿಡ್‌ನಿಂದ ಎರಡು ವರ್ಷ ಒಕ್ಕೂಟಗಳು ತೀವ್ರ ಸಮಸ್ಯೆಯಲ್ಲಿ ಸಿಲುಕಿದ್ದವು‌. ನಂತರ ದಿನಗಳಲ್ಲಿಯೂ ಹಾಲು ಸಂಗ್ರಹ ಪ್ರಮಾಣ ಕುಸಿದಿದೆ. ರೈತರು ಜಾನುವಾರುಗಳನ್ನು ಮಾರುತ್ತಿದ್ದಾರೆ. ದರ ಹೆಚ್ಚಳ ಅನಿವಾರ್ಯವಾಗಿದೆ’ ಎಂದು ರವಿ ಪ್ರತಿಪಾದಿಸಿದರು. ಅದಕ್ಕೆ ಸಚಿವರು, ‘ರೈತರಿಗೆ ಅನುಕೂಲ ಆಗಬೇಕು. ಗ್ರಾಹಕರ ಜೇಬಿಗೂ ಹೊರೆ ಆಗಬಾರದು. ಹೀಗಾಗಿ, ಈ ವಿಷಯದಲ್ಲಿ ಆದಷ್ಟು ಶೀಘ್ರದಲ್ಲಿ ಮುಖ್ಯಮಂತ್ರಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT