ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿ ಲೀ. ಹಾಲಿನ ದರ ₹3 ಹೆಚ್ಚಳಕ್ಕೆ ಕೆಎಂಎಫ್‌ ಬೇಡಿಕೆ

Last Updated 26 ಏಪ್ರಿಲ್ 2022, 19:30 IST
ಅಕ್ಷರ ಗಾತ್ರ

ಬೆಂಗಳೂರು: ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್‌ ಶುಲ್ಕ, ಸಾಗಾಣಿಕೆ ವೆಚ್ಚದಲ್ಲಿನ ದರ ಏರಿಕೆಯನ್ನು ಆಧರಿಸಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹ 3ರಷ್ಟು ಹೆಚ್ಚಳ ಮಾಡುವಂತೆ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ (ಕೆಎಂಎಫ್‌) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೇಡಿಕೆ ಇಟ್ಟಿದ್ದಾರೆ.

ಈ ಕುರಿತು ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಅಮೂಲ್‌ ಸೇರಿದಂತೆ ವಿವಿಧ ಸಹಕಾರ ಮತ್ತು ಖಾಸಗಿ ಹಾಲು ಉತ್ಪಾದನಾ ಸಂಸ್ಥೆಗಳು ಪ್ರತಿ ಲೀ.ಗೆ ₹ 8ರಿಂದ ₹ 10ರವರೆಗೆ ಹೆಚ್ಚಳ ಮಾಡಿವೆ. ರಾಜ್ಯದಲ್ಲಿ ಹಾಲಿನ ದರವನ್ನು ₹ 3ರಷ್ಟು ಹೆಚ್ಚಿಸಲು ಅನುಮತಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದೆ’ ಎಂದು ಹೇಳಿದ್ದಾರೆ.

ಪ್ರತಿ ಲೀ. ಹಾಲಿನ ದರವನ್ನು ₹ 3ರಷ್ಟು ಹೆಚ್ಚಳ ಮಾಡಲು ಅವಕಾಶ ನೀಡಿದರೆ ₹ 2 ಅನ್ನು ಹಾಲು ಉತ್ಪಾದಕ ರೈತರಿಗೆ ವರ್ಗಾಯಿಸಲಾಗುವುದು. ₹ 1 ಅನ್ನು ಹಾಲು ಉತ್ಪಾದಕರ ಸಹಕಾರ ಸಂಘ, ಹಾಲು ಒಕ್ಕೂಟಗಳು ಮತ್ತು ಮಾರಾಟಗಾರರಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಎರಡು ವರ್ಷಗಳ ಅವಧಿಯಲ್ಲಿ ಕೆಎಂಎಫ್‌ ಮತ್ತು ರಾಜ್ಯದ 14 ಹಾಲು ಒಕ್ಕೂಟಗಳ ವಹಿವಾಟಿನಲ್ಲಿ ಶೇಕಡ 20ರಷ್ಟು ಹೆಚ್ಚಳವಾಗಿದೆ. 2021–22ರಲ್ಲಿ ₹ 19,732 ಕೋಟಿ ವಹಿವಾಟು ನಡೆದಿದೆ. 2022–23ರಲ್ಲಿ ₹ 25,000 ಕೋಟಿ ವಹಿವಾಟು ನಡೆಸುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ₹ 15.15 ಕೋಟಿಯನ್ನು ಹಾಲು ಉತ್ಪಾದಕರ ಸಹಕಾರ ಸಂಘಗಳ ಕಟ್ಟಡ ನಿರ್ಮಾಣಕ್ಕೆ ನೀಡಲಾಗುವುದು. ಪಶು ಸಂಗೋಪನೆಗೆ ಪ್ರೋತ್ಸಾಹ ನೀಡಲು ₹ 50 ಕೋಟಿ ಒದಗಿಸಲಾಗುವುದು. 2022–23ರಲ್ಲಿ ₹ 300 ಕೋಟಿ ಮೌಲ್ಯದ ಹಾಲು ಮತ್ತು ಹಾಲಿನ ಉತ್ಪನ್ನಗಳ ರಫ್ತು ಮಾಡುವ ಗುರಿಯನ್ನು ಕೆಎಂಎಫ್‌ ಹೊಂದಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT