ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರದಲ್ಲಿ ಸಾರ್ವಜನಿಕರಿಗೆ ಮಸೀದಿ ದರ್ಶನ

Last Updated 6 ನವೆಂಬರ್ 2022, 8:56 IST
ಅಕ್ಷರ ಗಾತ್ರ

ಕೋಲಾರ: ಜಮಾಅತೆ ಇಸ್ಲಾಮಿ ಹಿಂದ್ ಮತ್ತು ಜಾಮಿಯಾ ಮಸೀದಿ ಸಹಯೋಗದಲ್ಲಿ ನಗರದ ಎಂ.ಬಿ.ರಸ್ತೆಯ ನಲ್ಲಗಂಗಮ್ಮ ದೇವಾಲಯ ಪಕ್ಕದಲ್ಲಿರುವ ಜಾಮಿಯಾ ಮಸೀದಿಯಲ್ಲಿ ಸಾರ್ವಜನಿಕರಿಗಾಗಿ ‘ನಮ್ಮೂರ ಮಸೀದಿ ನೋಡ ಬನ್ನಿ’ ಮಸೀದಿ ದರ್ಶನ ಕಾರ್ಯಕ್ರಮ ಭಾನುವಾರ ನಡೆಯಿತು.

ಸಾರ್ವಜನಿಕರಲ್ಲಿ ಸೌಹಾರ್ದ, ಸಾಮರಸ್ಯ, ಸಹಬಾಳ್ವೆ ಮೂಡಿಸಲು, ಪರಸ್ಪರರನ್ನು ಅರಿಯಲು ತಪ್ಪುಕಲ್ಪನೆ-ಅಪನಂಬಿಕೆ ದೂರ ಮಾಡಲು ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಸ್ತು ಪ್ರದರ್ಶನ, ಪುಸ್ತಕ ಪ್ರದರ್ಶನ ಏರ್ಪಡಿಸಲಾಗಿತ್ತು. ಪ್ರಾತ್ಯಕ್ಷಿಕೆ ಕೂಡ ಇತ್ತು.

ಸರ್ವಧರ್ಮೀಯರು ಮಸೀದಿಗೆ ಭೇಟಿ ನೀಡಿ ನಮಾಜ್‌ ಆರಾಧನಾ ಪ್ರಕ್ರಿಯೆಗಳನ್ನು ವೀಕ್ಷಿಸಿದರು. ಮಹಿಳೆಯರಿಗೂ ಅವಕಾಶ ನೀಡಲಾಗಿತ್ತು. ಸಾರ್ವಜನಿಕರ ಅನುಮಾನ ಹಾಗೂ ಪ್ರಶ್ನೆಗಳಿಗೆ ಮಸೀದಿಯ ಮೊಹಮ್ಮದ್ ನವಾಜ್ ಉತ್ತರಿಸಿದರು.

'ಮಸೀದಿಯಲ್ಲಿ ದಿನಕ್ಕೆ ಐದು ಬಾರಿ ನಮಾಜ್ ನಡೆಯುತ್ತದೆ. ನಮಾಜ್ ಹಾಗೂ ಪ್ರಾರ್ಥನೆ ವೇಳೆ ಯಾವುದೇ ತಾರತಮ್ಯ ಇಲ್ಲ. ಎಲ್ಲಿ ಜಾಗ ಇರುತ್ತದೆಯೋ ಅಲ್ಲಿ ಪ್ರಾರ್ಥನೆ ಮಾಡಲು ನಿಲ್ಲಬೇಕು. ಅದು ಸಚಿವರಾದರೂ ಅಷ್ಟೇ' ಎಂದು ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್ ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಕೆ.ಶ್ರೀನಿವಾಸಗೌಡ, ಕೆ.ಆರ್.ರಮೇಶ್‍ಕುಮಾರ್, ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್‍ಕುಮಾರ್, ಜೆಡಿಎಸ್‌ ಮುಖಂಡ ಸಿ.ಎಂ.ಆರ್.ಶ್ರೀನಾಥ್ ಹಾಗೂ ಮಸೀದಿ ಆಡಳಿತ ಮಂಡಳಿ ಸದಸ್ಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT