ಶುಕ್ರವಾರ, ಸೆಪ್ಟೆಂಬರ್ 17, 2021
24 °C

ಮಹೇಶ್‌ ಸೇರ್ಪಡೆಯಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಸಿಕ್ಕಿದೆ: ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊಳ್ಳೆಗಾಲ ಶಾಸಕ ಎನ್‌.ಮಹೇಶ್‌ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಗುರುವಾರ ಬಿಜೆಪಿಯನ್ನು ಸೇರ್ಪಡೆಗೊಂಡರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷದಿಂದ ಗೆದ್ದಿದ್ದ ಮಹೇಶ್‌ ಅವರು ಜೆಡಿಎಸ್‌– ಕಾಂಗ್ರೆಸ್‌ ಮೈತ್ರಿ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದರು. ಸರ್ಕಾರದ ಪತನದ ಬಳಿಮ ಅವರು ಬಿಜೆಪಿಯತ್ತ ವಾಲಿದರು. ಈ ಕಾರಣಕ್ಕೆ ಬಿಎಸ್‌ಪಿಯಿಂದ ಅವರನ್ನು ಉಚ್ಚಾಟಿಸಲಾಯಿತು.

ಈ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ಮಾತನಾಡಿ, ಮಹೇಶ್‌ ಚಳವಳಿಯಿಂದ ಬಂದವರು. ಅವರ ಸಂಘಟನಾ ಶಕ್ತಿ ದೊಡ್ಡ ಪ್ರಮಾಣದಲ್ಲಿದೆ. ಹೀಗಾಗಿ ಅವರು ಶಾಸಕರಾಗುವ ಮೊದಲೇ ದಲಿತ ಸಮುದಾಯದ ಹೃದಯವನ್ನು ಗೆದ್ದವರು. ಕೊಳ್ಳೆಗಾಲದ ಎಲ್ಲ ಜನಾಂಗ ಒಟ್ಟಾಗಿ ಇವರನ್ನು ಶಾಸಕರನ್ನಾಗಿ ಆರಿಸಿದ್ದಾರೆ. ಇತರ ಜನಾಂಗದವರೂ ಪ್ರೀತಿ ಹೊಂದಿದ್ದಾರೆ ಎಂದರು.

ಮಹೇಶ್‌ ಚಿಂತನೆ ಮತ್ತು ಬಿಜೆಪಿ ಚಿಂತನೆ ವಿಭಿನ್ನ ಅಲ್ಲ. ಸರ್ವೇಜನ ಸುಖಿನೋ ಭವಂತು ಎಂಬ ನಮ್ಮ ಚಿಂತನೆ ಅವರಿಗೆ ಮನವರಿಕೆ ಆದ ಮೇಲೆ, ಯಡಿಯೂರಪ್ಪ ಮುಖ್ಯಮಂತ್ರಿ ಆಗುವಾಗ ಸ್ವಯಂ ಪ್ರೇರಣೆಯಿಂದ ಬಂದು, ಬೆಂಬಲ ನೀಡಿದರು ಎಂದರು.

ರಾಜ್ಯದಲ್ಲಿ ಒಳ್ಳೆ ಸರ್ಕಾರ ಬರುತ್ತದೆ, ಯಡಿಯೂರಪ್ಪ ನೇತೃತ್ವದಲ್ಲಿ ತುಳಿತಕ್ಕೆ ಒಳಗಾದವರಿಗೆ ಸ್ವಾಭಿಮಾನದ ಬದುಕು ಕೊಡ್ತಾರೆ ಎಂಬ ವಿಶ್ವಾಸವಿಟ್ಟು ಬಂದಿದ್ದಾರೆ. ಅವರ ಎರಡು ವರ್ಷದ ಬಿಜೆಪಿ ಜತೆಗಿನ ಸಂಬಂಧದ ಕಾರಣ ಪಕ್ಷ ಸೇರಲು ನಿರ್ಣಯ ಮಾಡಲು ಸಾಧ್ಯವಾಗಿದೆ ಎಂದು ಬೊಮ್ಮಾಯಿ ಹೇಳಿದರು.

ಮಹೇಶ್‌ ಸೇವೆ ರಾಜ್ಯಕ್ಕೆ ಆಗಲಿ. ಅಷ್ಟು ಶಕ್ತಿ ಅವರಿಗಿದೆ. ವಿಜಯೇಂದ್ರ ಅವರು ವಾರಕ್ಕೆ ಒಮ್ಮೆ ಆ ಭಾಗದಲ್ಲಿ ಸುತ್ತಾಡಿ ಪಕ್ಷದ ಸಂಘಟನೆಯನ್ನು ಗಟ್ಟಿ ಮಾಡಿದ್ದಾರೆ. ವಿಜಯೇಂದ್ರ ಶ್ರಮಕ್ಕೆ ಮಹೇಶ್‌ ಶಕ್ತಿ ಸೇರಿದರೆ, ಮುಂದಿನ ದಿನಗಳಲ್ಲಿ ಆ ಭಾಗದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಜಯಬೇರಿ ಭಾರಿಸುತ್ತದೆ. ಯಡಿಯೂರಪ್ಪ ಕಾರಣದಿಂದ ಆ ಭಾಗದಲ್ಲಿ ಸಾಮರಸ್ಯ, ಸಹೋದರತ್ವ ಭಾವನೆಯ ನೆಲೆಗಟ್ಟು ಸ್ಥಾಪನೆ ಆಗಿದೆ. ಇನ್ನೂ ಹಲವು ಸಮುದಾಯದ ನಾಯಕರು ಬಿಜೆಪಿ ಸೇರುತ್ತಾರೆ ಎಂದರು.

ಇದನ್ನೂ ಓದಿ... ಬಿಎಸ್‌ವೈ ತಮ್ಮ ಕಣ್ಣೀರಿಗೆ ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಾರೆ: ಕಾಂಗ್ರೆಸ್‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು