ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಕೋನರಡ್ಡಿ ರಾಜೀನಾಮೆ ಘೋಷಣೆ
ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಹೀನಾಯ ಸೋಲು ಕಂಡ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಎನ್.ಎಚ್. ಕೋನರಡ್ಡಿ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಚುನಾವಣಾ ಉಸ್ತುವಾರಿಯೂ ಆಗಿದ್ದ ಕೋನರಡ್ಡಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಈ ಬಾರಿ ಕನಿಷ್ಠ 10 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿತ್ತು. ಪಕ್ಷ ಸಂಘಟನೆ ಕೈಗೊಂಡರೂ ಮತದಾರರು ನಮಗೆ ಮತ ಹಾಕಿಲ್ಲ. ವೈಫಲ್ಯದ ಹೊಣೆ ನಾನೇ ಹೊರುವೆ. ರಾಜೀನಾಮೆಯನ್ನು ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರಿಗೆ ಕಳುಹಿಸುತ್ತೇನೆ’ ಎಂದರು.
2013ರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ 9 ಸ್ಥಾನಗಳನ್ನು ಗಳಿಸಿತ್ತು. ಈ ಬಾರಿ ಒಂದು ಸ್ಥಾನವಷ್ಟೇ ಪಡೆದಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.